twitter
    For Quick Alerts
    ALLOW NOTIFICATIONS  
    For Daily Alerts

    ಗಿರೀಶ್ ಕಾಸರವಳ್ಳಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ

    By Rajendra
    |

    Girish Kasaravalli
    ಕನ್ನಡದ ಖ್ಯಾತ ನಿರ್ದೇಶಕ ಕಾಸರವಳ್ಳಿ ಅವರು 2010ನೇ ಸಾಲಿನ ದೇಶದ ನಾಲ್ಕನೇ ಅತ್ಯುನ್ನತ ನಾಗರೀಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಭಾಜನರಾಗಿದ್ದಾರೆ. ಕಲಾ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಅವರಿಗೆ ಈ ಅತ್ಯುನ್ನತ ಗೌರವವನ್ನು ನೀಡಿದೆ.

    ಪದ್ಮಶ್ರೀ ಪ್ರಶಸ್ತಿಯನ್ನು ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿಗಳು ನವದೆಹಲಿಯಲ್ಲಿ ಪ್ರದಾನ ಮಾಡಲಿದ್ದಾರೆ. ಕಾಸರವಳ್ಳಿ ಅವರಿಗೆ ಪದ್ಮ ಪ್ರಶಸ್ತಿ ಬರಬೇಕಾಗಿತ್ತು ಎಂಬ ಕೂಗು ಹಲವಾರು ವರ್ಷಗಳಿಂದ ಕೇಳಿಬರುತ್ತಿತ್ತು. ಈಗ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಆ ಆಸೆ ನೆರವೇರಿದೆ.

    ಕರ್ನಾಟಕದ 11 ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ

    ಕಾಸರವಳ್ಳಿ ಅವರ 'ಕನಸೆಂಬ ಕುದುರೆಯನೇರಿ' ಚಿತ್ರ 2009ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. ಅತ್ಯುತ್ತಮ ಚಿತ್ರಕತೆ ಹಾಗೂ ಅತ್ಯುತ್ತಮ ಚಿತ್ರ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿತ್ತು. ಕಾಸರವಳ್ಳಿ ಅವರಿಗೆ ದಟ್ಸ್ ಕನ್ನಡದ ಹೃತ್ಪೂರ್ವಕ ಅಭಿನಂದನೆಗಳು. [ಗಿರೀಶ್ ಕಾಸರವಳ್ಳಿ]

    English summary
    Kannada renowned film director Girish Kasaravalli will get the Padma Shri award 2010. The President of India has approved the conferment of Padma Awards-2010. The awards are conferred by the President of India at a function held at Rashtrapati Bhawan sometime around March/ April.
    Thursday, January 27, 2011, 10:28
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X