»   » ರಾಜ್ಯ ಸಭಾ ಸದಸ್ಯತ್ವಕ್ಕೆ ಜಯಶ್ರೀ ಕನ್ನಡದಲ್ಲಿ ಪ್ರಮಾಣ

ರಾಜ್ಯ ಸಭಾ ಸದಸ್ಯತ್ವಕ್ಕೆ ಜಯಶ್ರೀ ಕನ್ನಡದಲ್ಲಿ ಪ್ರಮಾಣ

Posted By:
Subscribe to Filmibeat Kannada
B Jayashree
ಖ್ಯಾತ ರಂಗಭೂಮಿ ಕಲಾವಿದೆ ಬಿ ಜಯಶ್ರೀ ರಾಜ್ಯಸಭಾ ಸದಸ್ಯರಾಗಿ ಸೋಮವಾರ (ಏ.26) ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭೆಯ ಸಭಾಪತಿ ಹಮೀದ್ ಅನ್ಸಾರಿ ಅವರ ಸಮ್ಮುಖದಲ್ಲಿ ಬಿ ಜಯಶ್ರೀ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಜಯಶ್ರೀ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಐವರು ಸಾಧಕರನ್ನು ರಾಜ್ಯಸಭೆಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ನಾಮಕರಣ ಮಾಡಿದ್ದರು.

ರಾಜ್ಯಸಭೆಯಲ್ಲಿ ಇಂದು ಪ್ರಶ್ನೋತ್ತರ ಅವಧಿಯ ಕಲಾಪಕ್ಕೂ ಮುನ್ನ ಬಿ ಜಯಶ್ರೀ ಪ್ರಮಾಣ ವಚನ ಸ್ವ್ವೀಕರಿಸಿ ರಾಜ್ಯಸಭೆ ಸದಸ್ಯತ್ವವನ್ನು ಸ್ವೀಕರಿಸಿದರು. ಏಪ್ರಿಲ್ 15ರಂದೇ ಜಯಶ್ರೀ ಅವರು ಪ್ರಮಾಣ ವಚನ ಸ್ವೀಕರಿಸಬೇಕಾಗಿತ್ತು. ಆದರೆ ಬಾಲಿವುಡ್ ನ 'ಲಕ್ಕಿ' ಚಿತ್ರದಲ್ಲಿ ಅಭಿನಯಿಸುತ್ತಿರುವ ಅವರು ಚಿತ್ರೀಕರಣಕ್ಕಾಗಿ ದಕ್ಷಿಣ ಆಫ್ರಿಕಾಗೆ ತೆರಳಿದ್ದ ಕಾರಣ ಅಂದು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ಖ್ಯಾತ ರಂಗಕರ್ಮಿ ಗುಬ್ಬಿ ವೀರಣ್ಣ ಅವರ ಮೊಮ್ಮಗಳಾದ ಜಯಶ್ರೀ(60) ರಂಗಭೂಮಿಯಲ್ಲಿ ನಿರ್ದೇಶಕಿಯಾಗಿ, ನಟಿಯಾಗಿ, ಗಾಯಕಿಯಾಗಿ ಸಾಕಷ್ಟು ಪ್ರಯೋಗಗಳಿಗೆ ತಮ್ಮನ್ನು ತೊಡಗಿಕೊಂಡವರು.ರಂಗಭೂಮಿಗೆ ಇನ್ನಷ್ಟು ಸೇವೆ ಸಲ್ಲಿಸಲು ಇದರಿಂದ ಸಾಧ್ಯವಾಗಲಿದೆ. ರಂಗಭೂಮಿಗೆ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆ ಮೈಸೂರು ರಂಗಾಯಣ ನಿರ್ದೇಶಕಿಯಾಗಿ ನೇಮಕಗೊಂಡಿದ್ದ ಜಯಶ್ರೀ ಅಲ್ಲಿನ ಸಿಬ್ಬಂದಿಯ ಅಸಹಕಾರದಿಂದ ಮನನೊಂದು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಜಯಶ್ರೀ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ. ಕಾರ್ ಕಾರ್ ಕಾರ್ ಎಲ್ನೋಡಿ ಕಾರ್...ಎಂಬ ಸಿನಿಮಾ ಹಾಡಿನ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗಿದ್ದರು. ರಂಗಗೀತೆಗಳನ್ನು ಅಷ್ಟೆ ಸೊಗಸಾಗಿ ಜಯಶ್ರೀ ಅವರು ಹಾಡುತ್ತಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada