ಫಿಲಂ ಚೇಂಬರ್‌ಗೆ ಹೊಸ ಸಾರಥಿ ಕೆವಿ ಚಂದ್ರಶೇಖರ್

By Rajendra

KFCC Chief KV Chandrashekhar
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಕೆಎಫ್‌ಸಿಸಿ) ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ ವಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ (ಸೆ.25) ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡ ಚಿತ್ರೋದ್ಯಮ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಚಿತ್ರರಂಗದ ಎಲ್ಲ ಪ್ರಮುಖರನ್ನು ಒಳಗೊಂಡ ಕೇಂದ್ರ ಸಲಹಾ ಸಮಿತಿಯನ್ನು ರಚಿಸುವುದಾಗಿ ತಿಳಿಸಿದರು. ಸಮಿತಿಯ ಮೂಲಕ ಚರ್ಚಿಸಿ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದರು.

ನಟ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಕಚೇರಿಯ ಆವರಣದಲ್ಲಿ ಸ್ಥಾಪಿಸುವ ಬಗ್ಗೆ ಕಾರ್ಯಕಾರಿಯೊಂದಿಗೆ ಚರ್ಚಿಸಿ ಒಂದು ತಿಂಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಮಂಡಳಿಯ ಉಪಾಧ್ಯಕ್ಷ ಹಾಗೂ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶನಕ ವಲಯದಿಂದ ತಲಾ ಒಬ್ಬೊಬ್ಬರನ್ನು ಆಯ್ಕೆ ಮಾಡಲಾಗಿದೆ. ನಿರ್ಮಾಪರ ವಲಯದಿಂದ ಉಪಾಧ್ಯಕ್ಷರಾಗಿ ರಾಕ್‌ಲೈನ್ ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಪ್ರದರ್ಶಕರ ವಲಯದಿಂದ ಜಯರಾಜ್ ಆಯ್ಕೆಯಾಗಿದ್ದಾರೆ. ವಿತರಕರ ವಲಯದಿಂದ ರಾಮು ಗೆಲುವು ಸಾಧಿಸಿದ್ದಾರೆ. ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪರ ವಲಯದಿಂದ ಸಾ.ರಾ.ಗೋವಿಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. (ದಟ್ಸ್‌ಕನ್ನಡ ಸಿನಿವಾರ್ತೆ)

More from Filmibeat

English summary
Kannada films well known exhibitor KV Chandrasekhar as the new President of Karnataka Film Chamber of Commerce (KFCC) has pretty good team to work for the progress of the Kannada cinema industry.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X