»   » ಕನ್ನಡ ಚಿತ್ರಗಳ ಕಡ್ಡಾಯ ಪ್ರದರ್ಶನಕ್ಕೆ ಕ್ರಮ

ಕನ್ನಡ ಚಿತ್ರಗಳ ಕಡ್ಡಾಯ ಪ್ರದರ್ಶನಕ್ಕೆ ಕ್ರಮ

Subscribe to Filmibeat Kannada

ಮೈಸೂರು, ಅ. 26: ರಾಜ್ಯದಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಪ್ರಯುಕ್ತ ಹಾಗೂ ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಪಿ ಮಣಿವಣ್ಣನ್ ಅವರು ಇತ್ತೀಚೆಗೆ ನಡೆದ ರಾಜ್ಯೋತ್ಸವ ಆಚರಣೆ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ, ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ನವೆಂಬರ್ ಒಂದರಿಂದ 7ರವರೆಗೆ ಒಂದು ವಾರದ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಆದೇಶ ನೀಡಲಾಗಿದೆ.

ಕನ್ನಡ ಚಿತ್ರಗಳ ಕಡ್ಡಾಯ ಪ್ರದರ್ಶನ: ನ. 01 ರಿಂದ ಒಂದು ವಾರಗಳ ಕಾಲ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳು ಹಾಗೂ ವಿಡಿಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಕೆ. ರಾಮಣ್ಣ ನಾಯ್ಕ್ ಅವರು ಆದೇಶಿಸಿದ್ದಾರೆ.

ಆದೇಶ ಉಲ್ಲಂಘಿಸುವ ಚಿತ್ರಮಂದಿರ ಮಾಲೀಕರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದಲ್ಲದೆ ಚಿತ್ರಮಂದಿರದ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ಸಿನಿ ವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada