ಸೆ.30ಕ್ಕೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ದರ್ಶನ್ ಸಾರಥಿ
ಕಡೆಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಸಾರಥಿ' ಚಿತ್ರಕ್ಕೆ ಬಿಡುಗಡೆ ಭಾಗ್ಯ ಲಭಿಸಿದೆ. ಇದೇ ಶುಕ್ರವಾರ (ಸೆ.30) ಸಾರಥಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ಶ್ರೀಅರಸೇಶ್ವರಿ ಸಿನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ವಿ.ಸತ್ಯಪ್ರಕಾಶ್ ಅವರು ನಿರ್ಮಿಸಿರುವ ಚಿತ್ರವಿದು.
ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಈ ಚಿತ್ರದ ಮೇಲೆ ಸಿಕ್ಕಾಪಟ್ಟೆ ಎಕ್ಸ್‌ಫೆಕ್ಟೇಷನ್ಸ್ ಇದೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ. ದರ್ಶನ್ ನಾಯಕರಾಗಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಸ್ವದೇಶ ಹಾಗೂ ವಿದೇಶಗಳಲ್ಲಿ ನಡೆದಿದೆ. ದೀಪ ಸನ್ನಿಧಿ, ರಂಗಾಯಣರಘು, ಲೋಹಿತಾಶ್ವ, ಅಜಯ್, ಬುಲೆಟ್ ಪ್ರಕಾಶ್, ಸಿತಾರ, ಶರತ್‌ಕುಮಾರ್, ಶರತ್ ಲೋಹಿತಾಶ್ವ, ಮುನಿ, ಕೋಟೆ ಪ್ರಭಾಕರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ದಿನಕರ್‌ತೂಗುದೀಪ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ರವಿವರ್ಮ, ಪಳನಿರಾಜ್ ಸಾಹಸ, ಮದನ್ ಹರಿಣಿ, ಹರ್ಷ ಹಾಗೂ ರಾಮು ನೃತ್ಯ, ದಿನಕರ್ ತೂಗುದೀಪ ಮತ್ತು ಚಿಂತನ್ ಕಥೆ ಹಾಗೂ ಮೂರ್ತಿ ಅವರ ನಿರ್ಮಾಣ ನಿರ್ವಹಣೆ ಸಾರಥಿ' ಚಿತ್ರಕ್ಕಿದೆ. (ದಟ್ಸ್‌ಕನ್ನಡ ಸಿನಿವಾರ್ತೆ)


Click it and Unblock the Notifications











