Don't Miss!
- Sports
IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್
- News
ಗ್ರಾಮಗಳು ವೃದ್ಧಾಶ್ರಮಗಳಾಗಿವೆ, ಉಡುಪಿಯಲ್ಲಿ ಐಟಿ ಪಾರ್ಕ್ ನಿರ್ಮಿಸಿ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀ ಒತ್ತಾಯ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಯಕ್ಷ ಲೋಕದಲ್ಲಿ ಕೋಮಲ್ ನಗೆಹಬ್ಬ
ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದರಲ್ಲಿ ಕೋಮಲ್ ಕೂಡ ಒಬ್ಬರು. ತಮ್ಮ ಅಭಿನಯದಿಂದ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಅವರು ಯೋಗೀಶ್ ನಾಯಕನಾಗಿ ನಟಿಸುತ್ತಿರುವ 'ಯಕ್ಷ' ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಣೆ ಮಾಡುತ್ತಿದ್ದಾರೆ. ಯೋಗೀಶ್ ಹಾಗೂ ಕೋಮಲ್ ಒಟ್ಟಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರವಿದು.
ಯಕ್ಷ ಚಿತ್ರದಲ್ಲಿ ಕೋಮಲ್ ಪೊಲೀಸ್ ಗುಪ್ತದಳದ ಅಧಿಕಾರಿಯ ಪಾತ್ರ ಸೇರಿದಂತೆ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಟ ನಾನಾಪಾಟೇಕರ್ ಅವರೊಂದಿಗೆ ಕೋಮಲ್ ಅಭಿನಯಿಸಿದ ಕೆಲವು ಹಾಸ್ಯ ಸನ್ನಿವೇಶಗಳನ್ನು ಇತ್ತೀಚೆಗೆ ಚಿತ್ರಿಸಿಕೊಳ್ಳಲಾಯಿತು ಎಂದು ನಿರ್ದೇಶಕ ರಮೇಶ್ ಭಾಗವತ್ ತಿಳಿಸಿದ್ದಾರೆ. 'ಯಕ್ಷ' ಪರಿಶುದ್ಧ ಮನೋರಂಜನೆಯಿಂದ ಕೂಡಿದ ಚಿತ್ರವಾಗಿದ್ದು, ನೋಡುಗರ ಮನಸೂರೆಗೊಳ್ಳಲಿದೆ ಎಂದಿದ್ದಾರೆ.
ಶ್ಯಾಮಿ ಅಸೋಸೆಟ್ಸ್ ಲಾಂಛನದಲ್ಲಿ ಟಿ.ಪಿ.ಸಿದ್ದರಾಜು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಅನುಪ್‌ಸೀಳಿನ್ ಸಂಗೀತ, ಚಂದ್ರಶೇಖರ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಕಲೈ, ಇಮ್ರಾನ್, ಹರ್ಷ ನೃತ್ಯ, ರವಿವರ್ಮ, ಮಾಸ್‌ಮಾದ ಸಾಹಸ, ಮಂಜುಮಾಂಡವ್ಯ ಸಂಭಾಷಣೆ ಮತ್ತು ಮಧುಗಿರಿಪ್ರಕಾಶ್ ಅವರ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ರೂಬಿ, ನಾನಾಪಾಟೇಕರ್, ಅತುಲ್‌ಕುಲಕರ್ಣಿ, ಮಾಸ್ಟರ್ ಹಿರಣ್ಣಯ್ಯ, ಕೋಮಲ್, ಮಹೇಶ್, ಗಿರೀಶ್‌ಮಟ್ಟಣ್ಣನವರ್, ಶರಣ್, ಅಂಬುಜಾಕ್ಷಿ ಮುಂತಾದವರಿದ್ದಾರೆ.