»   »  ಮಾತಿನ ಮನೆಯಲ್ಲಿ ‘ಮಳೆಯಲಿ ಜೊತೆಯಲಿ’

ಮಾತಿನ ಮನೆಯಲ್ಲಿ ‘ಮಳೆಯಲಿ ಜೊತೆಯಲಿ’

Posted By:
Subscribe to Filmibeat Kannada

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದಲ್ಲಿ ಹೊರಹೊಮ್ಮುತ್ತಿರುವ 'ಮಳೆಯಲಿ ಜೊತೆಯಲಿ" ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ನಡೆಯುತ್ತಿದೆ ಎಂದು ನಿರ್ಮಾಪಕಿ ಶಿಲ್ಪಾಗಣೇಶ್ ತಿಳಿಸಿದ್ದಾರೆ.

'ಮುಂಗಾರು ಮಳೆ"ಯ ಯಶಸ್ಸಿಗೆ ಕಾರಣರಾದವರಲ್ಲಿ ಕಥೆಗಾರ ಪ್ರೀತಂಗುಬ್ಬಿ ಕೂಡ ಒಬ್ಬರು. ನಂತರ 'ಹಾಗೆ ಸುಮ್ಮನೆ"ಚಿತ್ರವನ್ನು ನಿರ್ದೇಶಿಸುವ ಮೂಲಕ ಪ್ರೀತಂ ನಿರ್ದೇಶಕನ ಸ್ಥಾನಕ್ಕೆ ಬಡ್ತಿ ಪಡೆದರು. ಪ್ರಸ್ತುತ ಚಿತ್ರದ ನಿರ್ದೇಶನದ ಹೊಣೆ ಹೊತ್ತಿರುವ ಅವರು ಚಿತ್ರ ಉತ್ತಮ ಕಥಾ ಹಂದರ ಹೊಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದಿದ್ದಾರೆ.

ಗೋಲ್ಡನ್ ಮೂವೀಸ್ ಸಂಸ್ಥೆಯ ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಕೃಷ್ಣ ಛಾಯಾಗ್ರಹಣ, ವಿ.ಹರಿಕೃಷ್ಣ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ದೇವಶೆಟ್ಟಿ ಮಹೇಶ್ ಸಂಭಾಷಣೆ, ಕವಿರಾಜ್, ಜಯಂತ್ ಕಾಯ್ಕಿಣಿ ಗೀತರಚನೆ ಹಾಗೂ ಮೋಹನ್ ಕಲಾ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಗಣೇಶ್, ಅಂಜನಾ ಸುಖಾನಿ, ಯುವಿಕಾ ಚೌಧರಿ, ಸಿಹಿಕಹಿಚಂದ್ರು, ಸಿಹಿಕಹಿಗೀತಾ, ರಂಗಾಯಣ ರಘು, ಶರಣ್, ದತ್ತಣ್ಣ ಮುಂತಾದವರಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada