»   »  ಇದು 'ಇನಿಯ' ಬರುವ ಸಮಯ

ಇದು 'ಇನಿಯ' ಬರುವ ಸಮಯ

Posted By:
Subscribe to Filmibeat Kannada

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಗಳಲ್ಲಿ ಶೈಲೇಂದ್ರ ಪ್ರೊಡಕ್ಷನ್ಸ್ ಕೂಡ ಒಂದು. ಈ ಸಂಸ್ಥೆಯ ನಿರ್ಮಾಣದಲ್ಲಿ ಸಾಕಷ್ಟು ಜನಪ್ರಿಯ ಚಿತ್ರಗಳು ಹೊರ ಬಂದಿದೆ. ಪ್ರಸ್ತುತ ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಚಿತ್ರ 'ಇನಿಯ'. ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ಹಾಗೂ ಪ್ರತಿಷ್ಠಿತ ಸ್ಟೂಡಿಯೋದಲ್ಲಿ ಚಿತ್ರೀಕರಣೇತರ ಚಟುವಟಿಕೆಗಳನ್ನು ಪೂರ್ಣಗೊಳಿಸಿರುವ ಚಿತ್ರಕ್ಕೆ ಈಗ ಪ್ರಥಮಪ್ರತಿ ಸಿದ್ಧವಾಗಿದೆ.

ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಸನಿಹದಲ್ಲೇ 'ಇನಿಯ'ನನ್ನು ತೆರೆಗೆ ತರುವುದಾಗಿ ನಿರ್ಮಾಪಕ ಶೈಲೇಂದ್ರ ಬಾಬು ತಿಳಿಸಿದ್ದಾರೆ. 'ಮುಸ್ಸಂಜೆ ಮಾತು' ಚಿತ್ರವನ್ನು ನಿರ್ದೇಶಿಸಿ ಖ್ಯಾತರಾದ ಮಹೇಶ್ ಈ ಚಿತ್ರದ ನಿರ್ದೇಶಕರು. 'ಈ ಚಿತ್ರ ಕೂಡ ನನಗೆ ಯಶಸ್ಸು ತಂದುಕೊಡುವುದರಲ್ಲಿ ಸಂದೇಹವಿಲ್ಲ' ಎಂಬ ಅಭಿಪ್ರಾಯ ನಿರ್ದೇಶಕರಿಂದ ವ್ಯಕ್ತವಾಗಿದೆ.

ಬಾಲಾಜಿ ಚಿತ್ರದ ನಾಯಕರಾಗಿದ್ದು, ಪೂಜಾ ಗಾಂಧಿ 'ಇನಿಯನ ನಾಯಕಿಯಾಗಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುಂದರನಾಥ ಸುವರ್ಣರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಧುಸೂದನ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ವಿ.ಶ್ರೀಧರ್ ಸಂಗೀತ, ಕವಿರಾಜ್, ಶ್ರೀಧರ್ ಗೀತರಚನೆ, ಮೋಹನ್ ಸಂಕಲನ, ರವಿವರ್ಮರ ಸಾಹಸವಿರುವ ಚಿತ್ರದ ತಾರಾಬಳಗದಲ್ಲಿ ಜೈಜಗದೀಶ್, ಊರ್ವಶಿ, ರೇಖಾ, ಜ್ಯೋತಿ, ನೀನಾಸಂ ಅಶ್ವತ್, ಹರೀಶ್ ರಾಯ್, ಲೋಕನಾಥ್, ಬಿ.ವಿ.ರಾಧ ಮುಂತಾದವರಿದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada