»   »  ಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ

ಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ

Subscribe to Filmibeat Kannada
Nagathihalli Chandrashekar
ಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ ಮಾತಾಡ್ ಮಲ್ಲಿಗೆ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಕಾರ್ಯಕ್ರಮವನ್ನು ತರಂಗ ವಾರಪತ್ರಿಕೆಯ ಸಂಪಾದಕಿ ಎಸ್.ಸಂಧ್ಯಾ ಪೈ ಅವರು ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕ ಅಶೋಕ್ ಹೆಗಡೆ ಆಗಮಿಸಲಿದ್ದಾರೆ.

ಪ್ರತಿ ಚಿತ್ರ ಪ್ರದರ್ಶನದ ನಂತರ ವಿದ್ಯಾರ್ಥಿಗಳು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಚರ್ಚಿಸಬಹುದು. ಸಮಾರೋಪ ಸಮಾರಂಭಕ್ಕೆ ಫೆ.1ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ ಆಗಮಿಸಲಿದ್ದಾರೆ. ಸಮಾರೋಪ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಾರ್ಪೊರೇಷನ್ ಬ್ಯಾಂಕ್ ನ ಉಪ ಮುಖ್ಯ ವ್ಯವಸ್ಥಾಪಕ ಎನ್.ಮುರಳಿಧರ್ ಆಗಮಿಸಲಿದ್ದಾರೆ. ಮಣಿಪಾಲ್ ಅಕಾಡೆಮಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಶಾಂತಾರಾಮ್ ಅವರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada