ಬೇರು, ಹಸೀನಾ ಸೇರಿದಂತೆ 20ಚಿತ್ರಗಳಿಗೆ ಸಹಾಯ ಧನ
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಸಹಾಯ ಧನಕ್ಕೆ 20ಚಿತ್ರಗಳನ್ನು, ನಟಿ ಜಯಮಾಲಾ ನೇತೃತ್ವದ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಈ ಚಿತ್ರಗಳಿಗೆ ಸರ್ಕಾರ ತಲಾ ಹತ್ತು ಲಕ್ಷ ರೂ. ಸಬ್ಸಿಡಿ ನೀಡಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ತಾ ಸಚಿವ ಶಿವರಾಂ, ಪ್ರಸಕ್ತ ವರ್ಷ ಆಯ್ಕೆ ಸಮಿತಿ ಮುಂದೆ 58 ಚಿತ್ರಗಳು ಸಬ್ಸಿಡಿ ಬಯಸಿದ್ದವು ಎಂದರು.
ಇನ್ನು ಮುಂದೆ ರೀಮೇಕ್ ಚಿತ್ರಗಳಿಗೆ ಸಬ್ಸಿಡಿ ಮತ್ತು ಪ್ರಶಸ್ತಿ ನೀಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಸಚಿವರು ಘೋಷಿಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ಜ.9ರಂದು ಸಭೆ ಕರೆಯಲಾಗಿದೆ. ಈ ಸಭೆಗೆ ನಟ ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಚಿತ್ರೋದ್ಯಮದ ಗಣ್ಯರನ್ನು ಆಹ್ವಾನಿಸಲಾಗಿದೆ ಎಂದರು.
ಸಹಾಯ ಧನಕ್ಕೆ ಆಯ್ಕೆಯಾಗಿರುವ ಚಿತ್ರಗಳು :
(ಇನ್ಫೋ ವಾರ್ತೆ)
Post your views
ಮುಖಪುಟ / ಸ್ಯಾಂಡಲ್‌ವುಡ್


Click it and Unblock the Notifications