Just In
Don't Miss!
- News
ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Automobiles
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ 19ರಂದು ತೆರೆಕಾಣ್ತಿದೆ '3 ಗಂಟೆ 30 ದಿನ 30 ಸೆಕೆಂಡ್'
ಚಿತ್ರದ ಟೈಟಲ್ ನಿಂದಲೇ ಹೆಚ್ಚು ಗಮನ ಸೆಳೆದಿದ್ದ '3 ಗಂಟೆ 30 ದಿನ 30 ಸೆಕೆಂಡ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇದೇ ತಿಂಗಳು ಬೆಳ್ಳಿತೆರೆ ಮೇಲೆ ಅಬ್ಬರಿಸಲಿದೆ.
ನಟ ಅರುಣ್ ಗೌಡ ಮತ್ತು ಕಾವ್ಯಾ ಶೆಟ್ಟಿ ಈ ಚಿತ್ರದ ನಾಯಕ ನಾಯಕಿಯಾಗಿದ್ದು, ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರು ಈ ಚಿತ್ರಕ್ಕೆ ಸಾಥ್ ನೀಡಿದ್ದಾರೆ. 80ರ ದಶಕದ ನಟ-ನಟಿಯರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿರೋದು ವಿಶೇಷ.
ಇದೊಂದು ಲವ್ ಸ್ಟೋರಿಯಾಗಿದ್ದು, ಇದು ಟಿ.ವಿ. ಚಾನೆಲ್ ಮಾಲೀಕನ ಪುತ್ರಿ ಮತ್ತು ವಕೀಲನ ನಡುವೆ ನಡೆಯುವ ಕಥೆ. ನಾಯಕ ಅರುಣ್ ಗೌಡ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ ಈ ಇಬ್ಬರು ಹೇಗೆ ಹೊರಬರುತ್ತಾರೆ ಎನ್ನುವುದನ್ನು ಚಿತ್ರದಲ್ಲಿ ಮನರಂಜನೆಯ ಜೊತೆಗೆ ತೋರಿಸಲಾಗಿದೆ.
'ಎಡಕಲ್ಲು ಗುಡ್ಡದ ಮೇಲೆ' ಖ್ಯಾತಿಯ ಚಂದ್ರಶೇಖರ್, ಡೈನಾಮಿಕ್ ಹೀರೋ ದೇವರಾಜ್, ಸುಧಾರಾಣಿ, ಸುಂದರ್, ಯಮುನಾ, ಜಯಲಕ್ಷ್ಮಿ ಪಾಟೀಲ್, ಟಿ.ಎಸ್. ನಾಗಾಭರಣ, ಅನಂತ ವೇಲು, ರಮೇಶ್ ಭಟ್, ಶ್ರೀನಾಥ್ ವಸಿಷ್ಠ, ಹನುಮಂತೇ ಗೌಡ, ಯತಿರಾಜ್ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ.
ಕೆಲ ವರ್ಷಗಳಿಂದ ಜಾಹೀರಾತು ಕ್ಷೇತ್ರದಲ್ಲಿ ಕೆಲಸ ಮಾಡಿರುವ ಮಧುಸೂದನ್ ಅವರು ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಅವರ ಸಂಗೀತ ಚಿತ್ರಕ್ಕಿದ್ದು, ಒಟ್ಟು 6 ಹಾಡುಗಳಿವೆ. ಈಗಾಗಲೇ ಚಂದನ್ ಶೆಟ್ಟಿ ಹಾಡಿರುವ ಟೈಟಲ್ ಹಾಡು ಯೂಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಇನ್ನುಳಿದಂತೆ ಶ್ರೀನಿವಾಸ್ ರಾಮಯ್ಯ ಈ ಸಿನಿಮಾಕ್ಕೆ ಕ್ಯಾಮೆರಾ ಹಿಡಿದಿದ್ದು, ಚಂದ್ರಶೇಖರ್ ಆರ್. ಪದ್ಮಶಾಲಿ ನಿರ್ಮಾಣ ಮಾಡಿದ್ದಾರೆ.