»   »  ಕೈರೋ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಮುಖಪುಟ

ಕೈರೋ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಮುಖಪುಟ

Subscribe to Filmibeat Kannada

ರೂಪಾ ಅಯ್ಯರ್ ನಿರ್ದೇಶನದ ಚೊಚ್ಚಲ ಚಿತ್ರ 'ಮುಖ ಪುಟ' ಮತ್ತೊಂದು ಮೈಲುಗಲ್ಲು ಮುಟ್ಟಿದೆ. ಮುಂದಿನ ತಿಂಗಳು ಈಜಿಪ್ಟ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಕೈರೋ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಹ್ವಾನ ಪಡೆದಿದೆ. ರೂಪಾ ಅಯ್ಯರ್ ಸಹ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಮುಖಪುಟ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ನಾರಾಯಣ ಹೊಸ್ಮನೆ ಮಾತನಾಡುತ್ತಾ, ಈ ಎಲ್ಲಾ ಶ್ರೇಯಸ್ಸು ಚಿತ್ರದ ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಸಲ್ಲುತ್ತದೆ. ಆರಂಭದಲ್ಲಿ ಅವರು ಕೊಟ್ಟಂತಹ ಭರವಸೆಗಳೆಲ್ಲಾ ಈಗ ಸಾಕಾರವಾಗುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮುಖಪುಟ ಚಿತ್ರಕ್ಕೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಐರ್ಲೆಂಡ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ' ಹಾಗೂ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 'ಸಿಲ್ವೆರ್ ಫಿಯರ್ರಾ' ಪ್ರಶಸ್ತಿಗೆ 'ಮುಖಪುಟ' ಭಾಜನವಾಗಿದೆ. ದಕ್ಷಿಣ ಆಫ್ರಿಕಾ, ಥೈಲ್ಯಾಂಡ್, ವೇಲ್ಸ್ ಚಿತ್ರೋತ್ಸವಗಳಲ್ಲೂ ಈ ಚಿತ್ರ ಪ್ರದರ್ಶನ ಕಾಣಲಿದೆ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada