Just In
Don't Miss!
- News
45 ಲಕ್ಷ ಟನ್ ಭತ್ತ ಖರೀದಿಸುವಂತೆ ಕೇಂದ್ರಕ್ಕೆ ಮನವಿ: ಗೋಪಾಲಯ್ಯ
- Finance
ಮೈಂಡ್ ಟ್ರೀ ಕಂಪೆನಿ ನಿವ್ವಳ ಲಾಭ 66% ಹೆಚ್ಚಳ
- Automobiles
ಅನಾವರಣವಾಯ್ತು 2021ರ ಮೋಟೋ ಗುಜಿ ವಿ85 ಟಿಟಿ ಬೈಕ್
- Lifestyle
ಸ್ಟ್ರಾಬೆರ್ರಿ ಮಿಲ್ಕ್ ಶೇಕ್ ತುಂಬಾ ರುಚಿಯಾಗಿ ಮಾಡುವುದು ಹೇಗೆ
- Sports
'ಠಾಕೂರ್ ಆಲ್ ರೌಂಡರ್ ಪ್ರದರ್ಶನ ಟೆಸ್ಟ್ ಸರಣಿ ಜೀವಂತವಾಗಿರಿಸಿದೆ'
- Education
ECIL Recruitment 2021: 19 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿಕಿತ್ಸೆಗಾಗಿ ಪ್ಯಾರಿಸ್‌ಗೆ ಹ್ಯಾಟ್ರಿಕ್ ಹೀರೋ ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಜೂ.15ರಂದು ಪ್ಯಾರಿಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಅವರಿಗೆ ಹಿಂದೊಮ್ಮೆ ತಲೆಗೆ ಪೆಟ್ಟುಬಿದ್ದ ಕಾರಣ ಆಗಾಗ ಕುತ್ತಿಗೆ ಹಾಗೂ ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಚಿಕಿತ್ಸೆ ಬಳಿಕ ಜೂ.22ರಂದು ಶಿವಣ್ಣ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎನ್ನುತ್ತವೆ ಮೂಲಗಳು.
ಮುಂಬೈನ ಧೀರುಬಾಯ್ ಅಂಬಾನಿ ಆಸ್ಪತ್ರೆಯ ಸ್ಕ್ಯಾನಿಂಗ್ ರಿಪೋರ್ಟ್‌ಗಳನ್ನು ಹೆಚ್ಚಿನ ವಿವರಗಳಿಗಾಗಿ ಪ್ಯಾರಿಗೆ ಕಳುಹಿಸಲಾಗಿತ್ತು. ಪರೀಕ್ಷಿಸಿದ ಅಲ್ಲಿನ ವೈದ್ಯರು ಬಂದು ಚಿಕಿತ್ಸೆ ಪಡೆಯುವಂತೆ ಶಿವಣ್ಣನಿಗೆ ಸೂಚಿಸಿದ್ದಾರೆ. ಅಭಿಮಾನಿಗಳು ಗಾಬರಿಪಡುವಂತಹದ್ದು ಏನೂ ಆಗಿಲ್ಲ. ಒಂದು ಸಣ್ಣ ಚಿಕಿತ್ಸೆ ಅಷ್ಟೆ ಎನ್ನಲಾಗಿದೆ.
ಸದ್ಯಕ್ಕೆ ಭರಣಿ ಮಿನರಲ್ಸ್ ಅವರ 'ಲಕ್ಷ್ಮಿ' ಚಿತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿದ್ದಾರೆ. ಪ್ಯಾರಿಸ್‌ನಿಂದ ಹೊರಬಂದ ಬಳಿಕ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಶಿವಣ್ಣ ಅವರಿಗೆ ತಿಳಿಸಿದ್ದಾರೆ. ಇದಕ್ಕಾಗಿ ಒಂದು ವಾರ ಸಮಯ ಕೊಡುವಂತೆ ಅವರು ನಿರ್ಮಾಪಕರಲ್ಲಿ ವಿನಂತಿಸಿಕೊಂಡಿದ್ದಾರೆ. ಶಿವಣ್ಣ ಅವರಿಗೆ ಶುಭವಾಗಲಿ. (ದಟ್ಸ್‌ಕನ್ನಡ ಸಿನಿವಾರ್ತೆ)