ಶ್ರಾವಣ ಮಾಸದ ವರಮಹಾಲಕ್ಷ್ಮಿ ಹಬ್ಬಕ್ಕೆ ಶೌರ್ಯ
ಬಿ.ಬಸವರಾಜು ಹಾಗೂ ಎ.ವೆಂಕಟೇಶ್ ನಿರ್ಮಿಸಿರುವ 'ಶೌರ್ಯ' ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ದರ್ಶನ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರ ಶ್ರಾವಣ ಮಾಸದ ವರಮಹಾಲಕ್ಷ್ಮೀ ಹಬ್ಬದಂದು ತೆರೆಗೆ ಬರಲಿದೆ. ಶ್ರೀಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ.
ಕರ್ನಾಟಕದ ಸುಂದರ ಸ್ಥಳಗಳು, ಭಾರತದ ಪ್ರಸಿದ್ದ ಪ್ರವಾಸಿ ತಾಣವಾದ ಕುಲುಮನಾಲಿ ಹಾಗೂ ವಿದೇಶದಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ ಎಂದು ಚಿತ್ರದ ನಿರ್ದೇಶಕರಾದ ಸಾಧುಕೋಕಿಲಾ ತಿಳಿಸಿದ್ದಾರೆ.ನಿರ್ದೇಶಕ ಸಾಧುಕೋಕಿಲಾ ಚಿತ್ರದ ಸಂಗೀತ ನಿರ್ದೇಶಕರು ಹೌದು.
ರಮೇಶ್‌ಬಾಬು ಛಾಯಾಗ್ರಹಣ, ಜೋನಿಹರ್ಷ ಸಂಕಲನ, ಕೆ.ವಿ.ರಾಜು ಸಂಭಾಷಣೆ, ಪಳನಿರಾಜ್, ರವಿವರ್ಮ ಸಾಹಸ, ಪ್ರದೀಪ್ ಅಂತೋಣಿ ನೃತ್ಯ, ಇಸ್ಮಾಯಿಲ್ ಕಲಾ ನಿರ್ದೇಶನ, ಸುನೀಲ್ ಪಾಳ್ಯ ಸಹ ನಿರ್ದೇಶನ ಹಾಗೂ ಅನಿಲ್‌ಕುಮಾರ್ ನಿರ್ಮಾಣ ನಿರ್ವಹಣೆಯಿದೆ. 'ಶೌರ್ಯ' ಚಿತ್ರದ ತಾರಾಬಳಗದಲ್ಲಿ ದರ್ಶನ್, ಮದಲಸಾ, ರಿಮಾ ವರ್ಮ, ಮುಮೈತ್ ಖಾನ್, ಓಂಪ್ರಕಾಶ್, ಬುಲೆಟ್ ಪ್ರಕಾಶ್, ಸಂಪತ್‌ಕುಮಾರ್, ಜಾನ್‌ಕೋಕಿನ್, ಅವಿನಾಶ್, ರಮೇಶ್‌ಭಟ್, ಚಿತ್ರಾಶೆಣೈ ಮುಂತಾದವರಿದ್ದಾರೆ.


Click it and Unblock the Notifications











