ದೊಡ್ಡ ಮನಸು ಮಾಡಿ ಬೆನ್ನುನೋವು ಶಸ್ತ್ರ ಚಿಕಿತ್ಸೆಗೆ ಒಳಗಾದ ದರ್ಶನ್,..?
ದರ್ಶನ್ ಅನಾರೋಗ್ಯದ ನೆಪ ಹೇಳಿ ಜೈಲಿಂದ ಹೊರ ಬಂದು 45 ದಿನವಾದರೂ ಕೂಡ ಇನ್ನೂ ಶಸ್ತ್ರ ಚಿಕಿತ್ಸೆ ಆಗಿಲ್ಲ. ದಿನ ನಿತ್ಯ ಇವತ್ತು, ನಾಳೆ ಎಂದು ಮುಂದೂಡುತ್ತಾನೇ ಬಂದಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ, ಮಾಧ್ಯಮದಲ್ಲಿ ಈ ಕುರಿತು ಚರ್ಚೆಯಾಗುತ್ತಿದೆ. ದರ್ಶನ್ ಎಲ್ಲರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇದರ ನಡುವೆ ದರ್ಶನ್ ದೊಡ್ಡ ಮನಸು ಮಾಡಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎನ್ನುವ ಬ್ರೇಕಿಂಗ್ ನ್ಯೂಸ್ ಸದ್ಯ ಹೊರ ಬಿದ್ದಿದೆ. ಹೌದು, ಬೇಕು-ಬೇಡದ ನಡುವೆ ದರ್ಶನ್ ನಿನ್ನೆ ಬುಧವಾರ ಗ್ಲೆನೆಗಲ್ಸ್ ಗ್ಲೋಬರ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬ ಮಾತು ಸದ್ಯ ಕೇಳಿ ಬರುತ್ತಿದೆ.

ಆದರೆ ಈ ಕುರಿತು ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದ್ದಾರೆ ಎಂಬ ಸುದ್ದಿ ಕೂಡ ಅನೇಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ನಿಜಕ್ಕೂ ನಿನ್ನೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿದ್ದಾರಾ ಎನ್ನುವ ಅನುಮಾನ ಕೂಡ ಈಗ ಅನೇಕರನ್ನು ಕಾಡುತ್ತಿದೆ. ಶಸ್ತ್ರ ಚಿಕಿತ್ಸೆ ನಿಜಕ್ಕೂ ನಡೆದಿದ್ದೇ ಆದಲ್ಲಿ ಅದರಲ್ಲಿ ಮುಚ್ಚುಮರೆ ಯಾಕೆ ಎನ್ನುವ ಪ್ರಶ್ನೆ ಕೂಡ ಎದ್ದಿದೆ.
ಈ ಹಿನ್ನೆಲೆ ಕಾನೂನಿನ ಸಮಸ್ಯೆಯಿಂದ ಯಾವ ವಿಚಾರವನ್ನು ಬಹಿರಂಗಗೊಳಿಸದಂತೆ ದರ್ಶನ್ ಅವರ ಕುಟುಂಬ ವರ್ಗ ಆಸ್ಪತ್ರೆಯವರಿಗೆ ಹೇಳಿದ್ದಾರೆ ಎನ್ನುವ ಮಾತು ಸದ್ಯ ಕೇಳಿ ಬರುತ್ತಿದೆ. ದರ್ಶನ್ ಅವರ ಶಸ್ತ್ರಚಿಕಿತ್ಸೆ ಬಗ್ಗೆ ಎಲ್ಲಿಯೂ ಮಾಹಿತಿ ಲೀಕ್ ಆಗಬಾರದು ಗೌಪ್ಯವಾಗಿಯೇ ಇರಬೇಕು. ಅವರ ಚಿಕಿತ್ಸೆಯಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಕಾರ್ಯವಿಧಾನದ ಬಗ್ಗೆ ತಿಳಿದಿರಬೇಕು. ಬೇರೆ ಯಾರಿಗೂ ಈ ಬಗ್ಗೆ ತಿಳಿಯಬಾರದು ಎಂದು ದರ್ಶನ್ ಕುಟುಂಬದಿಂದ ಒತ್ತಾಯ ಇದೆ ಎಂದು ವರದಿಯಾಗಿದೆ. ದರ್ಶನ್ ಶಸ್ತ್ರ ಚಿಕಿತ್ಸೆಯ ಕುರಿತ ಸಸ್ಪೆನ್ಸ್ ಈ ಮೂಲಕ ಮುಂದುವರೆದಿದೆ.
ಇನ್ನುಳಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 09ರಂದು ನಡೆದಿತ್ತು. ತನಿಖಾಧಿಕಾರಿಗಳ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದ್ದರೆ, ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು.ಡಿಸೆಂಬರ್ 11ಕ್ಕೆ ಮುಕ್ತಾಯವಾಗಲಿರುವ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲವೆಂದ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಹೇಳಿದ್ದರು. ಡಿಸೆಂಬರ್ 11ಕ್ಕೆ ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಇದೆ ಎಂದು ಹೇಳಿದ್ದರು.
ಹೀಗಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಅವರು ನಟ ದರ್ಶನ್ ಮಧ್ಯಂತ ಜಾಮೀನನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು. ಈಗ ತಮ್ಮ ವಾದದಲ್ಲಿ ಸಿ.ವಿ.ನಾಗೇಶ್ ಅವರು ಹೇಳಿದಂತೆ ದರ್ಶನ್ ಅವರಿಗೆ ನಿನ್ನೆ ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಅಂದ್ಹಾಗೇ ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ ಅಲ್ಲಿಯೇ ಅವರಿಗೆ ವೈದ್ಯರು ಕೆಲವು ಪರೀಕ್ಷೆಗಳನ್ನ ಮಾಡಿ, ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲಾ ವರದಿಗಳನ್ನು ಆಧರಿಸಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.


Click it and Unblock the Notifications











