Don't Miss!
- Education
International Labour Day 2021: ಮೇ 1ರಂದು ಕಾರ್ಮಿಕರ ದಿನವನ್ನಾಗಿ ಏಕೆ ಆಚರಿಸಲಾಗುತ್ತೆ ?
- News
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ಸೋಂಕಿತೆ ಸಾವು
- Sports
ಐಪಿಎಲ್ 2021: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್
- Finance
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಏಪ್ರಿಲ್ 19ರ ಮಾರುಕಟ್ಟೆ ದರ ಇಲ್ಲಿದೆ
- Automobiles
ಪವರ್ಫುಲ್ ಎಂಜಿನ್ ಹೊಂದಿರುವ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್ಯುವಿ ಕಾರಿನ ವಿಡಿಯೋ
- Lifestyle
ಪ್ರತಿದಿನ ಒಂದು ಕಪ್ ಅನಾನಸ್ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
BREAKING: ಚಿತ್ರಮಂದಿರದ ಮೇಲೆ ಮತ್ತೆ ನಿರ್ಬಂಧ, ಕೆಲವು ಜಿಲ್ಲೆಗಳಿಗೆ ಮಾತ್ರ
ಚಿತ್ರಮಂದಿರಗಳ ಮತ್ತೆ ನಿರ್ಭಂದ ವಿಧಿಸಿದೆ ರಾಜ್ಯ ಸರ್ಕಾರ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಕಾರಣ ಕೆಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ 50% ಆಸನವನ್ನಷ್ಟೆ ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿ ಸರ್ಕಾರವು ಸಾರ್ವಜನಿಕರು ಒಟ್ಟು ಸೇರುವ ಪ್ರದೇಶಗಳ ಮೇಲೆ ನಿರ್ಬಂಧ ಹೇರಿದ್ದು, ಹೊಸ ಆದೇಶದಂತೆ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗಷ್ಟೆ ಅವಕಾಶ ನೀಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಚಿತ್ರಮಂದಿರಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಚಿತ್ರಮಂದಿರಗಳು, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಧಾರಾವಾಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಚಿತ್ರಮಂದಿರಗಳ ಒಟ್ಟು ಸೀಟು ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರವೇ ಸಿನಿಮಾ ನೋಡಲು ಅವಕಾಶ ನೀಡಬೇಕಿದೆ.
ಕೆಲವು ದಿನಗಳ ಹಿಂದಷ್ಟೆ ಬಿಬಿಎಂಪಿಯು ಚಿತ್ರಮಂದಿರಗಳು ಸೇರಿದಂತೆ ಇನ್ನೂ ಕೆಲವು ಪ್ರದೇಶಗಳ ಮೇಲೆ ನಿರ್ಬಂಧ ಹೇರುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಚಿತ್ರರಂಗದಿಂದ ಭಾರಿ ವಿರೋಧ ಎದುರಾಗಿದ್ದ ಕಾರಣ, ಚಿತ್ರಮಂದಿರಗಳ ಮೇಲೆ ನಿರ್ಭಂದ ಹೇರುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲವೆಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ ಈಗ ಸರ್ಕಾರ ಹಠಾತ್ತನೆ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿದೆ.
ಪುನೀತ್ ರಾಜ್‌ಕುಮಾರ್ ನಟನೆಯ 'ಯುವರತ್ನ' ಸಿನಿಮಾವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ನಡೆಸುತ್ತಿದೆ. ಕೆಲವೇ ದಿನಗಳಲ್ಲಿ ದುನಿಯಾ ವಿಜಯ್ ನಟನೆಯ 'ಸಲಗ' ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ ಈ ಸಮಯದಲ್ಲಿ ಸರ್ಕಾರ ವಿಧಿಸಿರುವು ಈ ನಿರ್ಬಂಧ ನಿರ್ಮಾಪಕರ ಮೇಲೆ ಭಾರಿ ಹೊರೆಯಾಗಲಿದೆ.