Just In
Don't Miss!
- News
ಭಾರತದಲ್ಲಿ 20.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟಿ ತಾರಾ ಅಭಿನಯದ 'ಹೆಬ್ಬೆಟ್ ರಾಮಕ್ಕ' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗೌರವ
2017ನೇ ಸಾಲಿನ ಪ್ರತಿಷ್ಟಿತ 65ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದೆ. ನಟಿ ತಾರಾ ಅಭಿನಯದ ಕನ್ನಡದ 'ಹೆಬ್ಬೆಟ್ ರಾಮಕ್ಕ' ಚಿತ್ರಕ್ಕೆ ಪ್ರಾದೇಶಿಕ ಭಾಷೆಗಳ ವಿಭಾಗದಲ್ಲಿ 'ಅತ್ಯುತ್ತಮ ಚಿತ್ರ' ಪ್ರಶಸ್ತಿ ಲಭಿಸಿದೆ.
'ಹೆಬ್ಬೆಟ್ ರಾಮಕ್ಕ'... ಹೆಸರೇ ಹೇಳುವಂತೆ ಇದೊಂದು ಅನಕ್ಷರಸ್ಥ ಮಹಿಳೆಯ ಕಥೆ. ರಾಜಕೀಯದಲ್ಲಿ ಮಹಿಳಾ ಮೀಸಲಾತಿಯ ದುರುಪಯೋಗವನ್ನು ವಿಡಂಬನೆಯಾಗಿ ತೋರಿಸಿರುವ ಸಿನಿಮಾ ಇದು. ಹಾಗ್ನೋಡಿದ್ರೆ, ಮಹಿಳಾ ರಾಜಕಾರಣಿಗಳಿಗೆ ಈ ಚಿತ್ರ ಸ್ಫೂರ್ತಿ ತುಂಬುತ್ತದೆ.
ಪ್ರಜಾಪ್ರಭುತ್ವದಲ್ಲಿ ತಾವು ಕಣ್ಣಾರೆ ಕಂಡಿರುವ ಅನೇಕ ಸಂಗತಿಗಳನ್ನು 'ಹೆಬ್ಬೆಟ್ ರಾಮಕ್ಕ' ಚಿತ್ರದ ಮೂಲಕ ತೆರೆಗೆ ತಂದವರು ನಿರ್ದೇಶಕ ಎನ್.ಆರ್.ನಂಜುಂಡೇ ಗೌಡ. ರಾಮಕ್ಕ ಎಂಬ ದಿಟ್ಟ ಮಹಿಳೆಯ ಪಾತ್ರಕ್ಕೆ ಜೀವ ತುಂಬಿರುವವರು ರಾಜಕಾರಣಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ತಾರಾ.
2017ನೇ ಸಾಲಿನ ಪ್ರತಿಷ್ಟಿತ ರಾಷ್ಟ್ರ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ 'ಹೆಬ್ಬೆಟ್ ರಾಮಕ್ಕ' ಚಿತ್ರದಲ್ಲಿ ನಟಿ ತಾರಾ ಜೊತೆಗೆ ದೇವರಾಜ್, ರಾಜಕಾರಣಿಯಾಗಿ ನಾಗರಾಜ್ ಮೂರ್ತಿ, ಮೌಲ್ವಿಯಾಗಿ ಸುರೇಶ್ ಅಭಿನಯಿಸಿದ್ದಾರೆ.
ಮನರಂಜನೆ ಜೊತೆಗೆ ಸಾಮಾಜಿಕ ಸಂದೇಶ ಸಾರುವ 'ಹೆಬ್ಬೆಟ್ ರಾಮಕ್ಕ' ಮಹಿಳೆಯರಿಗೆ ಸ್ಪೂರ್ತಿದಾಯಕ ಸಿನಿಮಾ ಕೂಡ ಹೌದು. ಫೆಬ್ರವರಿ ತಿಂಗಳಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ 'ಹೆಬ್ಬೆಟ್ ರಾಮಕ್ಕ' ಚಿತ್ರಕ್ಕೆ ಇದೀಗ ರಾಷ್ಟ್ರ ಪ್ರಶಸ್ತಿಯ ಗೌರವ ಸಿಕ್ಕಿದೆ.