For Quick Alerts
  ALLOW NOTIFICATIONS  
  For Daily Alerts

  ಸೈಮಾ ಆಯ್ತು ಬೆಂಗಳೂರಿನಲ್ಲಿ ಫಿಲ್ಮ್ ಫೇರ್ ಅವಾರ್ಡ್ಸ್ ಕಾರ್ಯಕ್ರಮ! ದಿನಾಂಕ ಬಹಿರಂಗ

  |

  ಇದೇ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಮೂವಿ ಅವಾರ್ಡ್ಸ್ ಕಾರ್ಯಕ್ರಮ ನಡೆಯಿತು. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ ಅವಾರ್ಡ್ಸ್ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಪುನೀತ್ ರಾಜ್‌ಕುಮಾರ್ ಅವರಿಗೆ ನಮನ ಸಲ್ಲಿಸಲು ಹಾಗೂ ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟಿಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾರಣ ಈ ಬಾರಿ ಸೈಮಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದೇವೆ ಎಂದು ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ತಿಳಿಸಿದ್ದರು.

  ಹೀಗೆ ಬೆಂಗಳೂರಿನಲ್ಲಿ ಈ ಬಾರಿ ಸೈಮಾ ನಡೆದದ್ದು ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿತ್ತು. ಇದೀಗ ಸೈಮಾ ಬೆನ್ನಲ್ಲೇ ಫಿಲ್ಮ್ ಫೇರ್ ಸೌತ್ ಅವಾರ್ಡ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಆಯೋಜನೆಯಾಗುತ್ತಿದೆ. ಹೌದು, ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಅಕ್ಟೋಬರ್ 9ರಂದು ಜರುಗಲಿದೆ.

  ಇನ್ನು ಅಂತಿಮವಾಗಿ 2019ರಲ್ಲಿ ಫಿಲ್ಮ್ ಫೇರ್ ಪ್ರಶಸ್ತಿ ಕಾರ್ಯಕ್ರಮ ಜರುಗಿತ್ತು. ಅದಾದ ಬಳಿಕ ಕೊರೊನಾ ವೈರಸ್ ಕಾರಣದಿಂದಾಗಿ ಫಿಲ್ಮ್ ಫೇರ್ ಅವಾರ್ಡ್ಸ್ ನಡೆದಿರಲಿಲ್ಲ. ಹೀಗೆ ಮೂರು ವರ್ಷಗಳ ಬಳಿಕ ಫಿಲ್ಮ್ ಫೇರ್ ನಡೆಯಲಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಬೃಹತ್ ಕಾರ್ಯಕ್ರಮ ಜರುಗಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ನಗರವೊಂದರಲ್ಲಿ ಸೈಮಾ ಹಾಗೂ ಫಿಲ್ಮ್ ಫೇರ್ ಎರಡೂ ಕಾರ್ಯಕ್ರಮಗಳೂ ನಡೆದಂತಾಗಲಿದೆ.

  ಇನ್ನು ಈ ಕಾರ್ಯಕ್ರಮವನ್ನು ಸಾಮಾನ್ಯ ಜನರೂ ಸಹ ವೀಕ್ಷಿಸಬಹುದಾಗಿದ್ದು, ಬುಕ್‌ ಮೈ ಶೋ ಅಪ್ಲಿಕೇಶನ್‌ನಲ್ಲಿ ಈಗಾಗಲೇ ಮುಂಗಡ ಬುಕಿಂಗ್ ಆರಂಭಗೊಂಡಿದೆ.

  English summary
  After SIIMA 67th Filmfare awards south to be held in Bengaluru on October 9
  Friday, September 23, 2022, 14:55
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X