»   » 8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ

8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ

Posted By:
Subscribe to Filmibeat Kannada

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಂಯುಕ್ತಾಶ್ರಯದಲ್ಲಿ ನಾಳೆ (ಜನವರಿ 28) ಸಂಜೆ 5.30ಕ್ಕೆ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ (ಪೂರ್ವದ್ವಾರ) 8ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ದೊರೆಯಲಿದೆ.

ರಾಜ್ಯಸಭಾ ಸದಸ್ಯರು ಹಾಗೂ ಭಾರತೀಯ ಚಲನಚಿತ್ರರಂಗದ ಹಿರಿಯ ತಾರೆ ಶ್ರೀಮತಿ ಜಯಾಬಚ್ಚನ್ ಅವರು ಸಿನಿಮೋತ್ಸವದ ಉದ್ಫಾಟನೆಯನ್ನು ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಹಿಸಲಿದ್ದಾರೆ.[ಚಲನಚಿತ್ರೋತ್ಸವ ಕುರಿತಾಗಿ ಸಿ.ಎಂ ನೀಡಿದ ಮುಖ್ಯಾಂಶಗಳು]

8th Bengaluru International film festival inauguration tomorrow

ಸಮಾರಂಭದ ಗೌರವ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಆಗಮಿಸುವರು. ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಖಾತೆ ಸಚಿವ ಆರ್.ರೋಷನ್ ಬೇಗ್ ಅವರು ಆಶಯಭಾಷಣ ಮಾಡುವರು.[ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2016ರ ವಿಶೇಷತೆಗಳು]

ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಹಿರಿಯ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀ ಸಂಜಯ್‌ ಲೀಲಾ ಬನ್ಸಾಲಿ ಬಿಡುಗಡೆ ಮಾಡುವರು. ಸಮಾರಂಭದ ವಿಶೇಷ ಆಹ್ವಾನಿತರಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಸತಿ ಸಚಿವ ಡಾ.ಎಂ.ಹೆಚ್.ಅಂಬರೀಶ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಶ್ರೀಮತಿ ಉಮಾಶ್ರೀ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಬೆಂಗಳೂರು ಮಹಾಪೌರ ಬಿ.ಎನ್.ಮಂಜುನಾಥ ರೆಡ್ಡಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಪಾಲ್ಗೊಳ್ಳುವರು.[2016ರ ಸಿನಿಮೋತ್ಸವದಲ್ಲಿ ಕನ್ನಡ ಮತ್ತು ತುಳು ಚಿತ್ರಗಳ ಅಬ್ಬರ]

ಮುಖ್ಯ ಅತಿಥಿಗಳಾದ ಹಾಲಿವುಡ್ ಚಲನಚಿತ್ರ ನಿರ್ಮಾಪಕ ಡಾ.ಅಶೋಕ್ ಅಮೃತರಾಜ್, ಕನ್ನಡ ಚಲನಚಿತ್ರರಂಗದ ಖ್ಯಾತ ಕಲಾವಿದರಾದ ಡಾ.ಶಿವರಾಜ್ ಕುಮಾರ್ ಮತ್ತು ಸುದೀಪ್, ತೆಲುಗು ಚಲನಚಿತ್ರ ಕಲಾವಿದ ಡಿ.ವೆಂಕಟೇಶ್ ಅವರು ಪಾಲ್ಗೊಳ್ಳುವರು.

English summary
The 8th Bengaluru International Film Festival (Biffes) will be inaugurated tomorrow (January 28th) in Vidhana Soudha, Bengaluru at 5.30 pm.

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X