»   » 8ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಿತಿ ರಚನೆ

8ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಿತಿ ರಚನೆ

Posted By:
Subscribe to Filmibeat Kannada

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಏರ್ಪಡಿಸುವ 8ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2015ಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಘಟನಾ ಸಮಿತಿ ರಚಿಸಲಾಗಿದೆ.

ಈ ಸಂಘಟನಾ ಸಮಿತಿಯಲ್ಲಿ ಮುಖ್ಯಮಂತ್ರಿಗಳು ಗೌರವಾಧ್ಯಕ್ಷರಾಗಿದ್ದು, ರಾಜ್ಯ ವಾರ್ತಾ ಇಲಾಖೆ, ಮೂಲ ಸೌಲಭ್ಯ ಅಭಿವೃದ್ಧಿ ಮತ್ತು ಹಜ್ ಖಾತೆಯ ಸಚಿವರು ಕಾರ್ಯಾಧ್ಯಕ್ಷರಾಗಿದ್ದಾರೆ.

bengaluru international film festival

ಸಂಘಟನಾ ಸಮಿತಿಯಲ್ಲಿ ಒಟ್ಟು 14 ಸದಸ್ಯರಿದ್ದಾರೆ. ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಜಯಮಾಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಚಲನಚಿತ್ರ ನಿರ್ದೇಶಕರಾದ ಡಾ. ಗಿರೀಶ್ ಕಾಸರವಳ್ಳಿ, ಟಿ.ಎಸ್. ನಾಗಭರಣ, ರೈಲ್ವೇ ಎ.ಡಿ.ಜಿ.ಪಿ. ಆರ್.ಪಿ. ಶರ್ಮಾ, ಚಲನಚಿತ್ರ ಕಲಾವಿದೆ ಕುಮಾರಿ ರಾಧಿಕಾ ಪಂಡಿತ್, ಪತ್ರಕರ್ತರ ಎನ್. ವಿಶಾಖ, ಕೇಂದ್ರ ಸೆನ್ಸಾರ್ ಮಂಡಳಿ ಅಧಿಕಾರಿ ನಾಗೇಂದ್ರಸ್ವಾಮಿ, ಬೆಂಗಳೂರು ಫಿಲ್ಮ್ ಸೊಸೈಟಿ ಅಧ್ಯಕ್ಷ ಜಾರ್ಜ್ ಕುಟ್ಟಿ, ಚಿಲ್ಡ್ರನ್ಸ್ ಇಂಡಿಯಾ ಅಧ್ಯಕ್ಷ ನಂಜುಂಡೇಗೌಡ ಅವರು ಸದಸ್ಯರಾಗಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಸಂಘಟನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ಚಲನಚಿತ್ರೋತ್ಸವದ ಕೋರ್ ಕಮಿಟಿಯನ್ನು ಸಹ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸಮಿತಿಯಲ್ಲಿ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು, ಚಲನಚಿತ್ರೋತ್ಸವದ ಕಾರ್ಯಕಾರಿ ನಿರ್ದೇಶಕರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಮತ್ತೋರ್ವ ಕಲಾತ್ಮಕ ನಿರ್ದೇಶಕರು ಸದಸ್ಯರುಗಳಾಗಿದ್ದು ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಸಂಘಟನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

English summary
The Organising Committee under the Chairmanship of Chief Minister of Karnataka, Siddaramaiah is formed for 8th Bengaluru International Film Festival.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada