»   » ಆರಂಭ ಚಿತ್ರಕ್ಕೆ ಎಮ್ಮೆ ಬಲಿ? ಇದು ಕಥೆಯಲ್ಲ ನಿಜ

ಆರಂಭ ಚಿತ್ರಕ್ಕೆ ಎಮ್ಮೆ ಬಲಿ? ಇದು ಕಥೆಯಲ್ಲ ನಿಜ

Posted By: ಉದಯರವಿ
Subscribe to Filmibeat Kannada
For Quick Alerts
ALLOW NOTIFICATIONS
For Daily Alerts

  ಇದು ಪಟ್ಟು ಬಿಡದ ನಿರ್ದೇಶಕ ಮತ್ತು ನಟನೊಬ್ಬನ ಕಲಾನಿಷ್ಠೆಯ ಪರಿ! ಆರಂಭ ಚಿತ್ರದ ಹಾಡುಗಳು ಮತ್ತು ಟೀಸರ್ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಚಿತ್ರದಲ್ಲಿ ಸದ್ದು ಮಾಡುವ ತಮಟೆಯೊಂದರ ಹಿಂದಿನ ಕಥೆಯಿದು! ಕಥೆಯಲ್ಲ, ನೈಜ ಘಟನೆ!

  ಎಸ್. ಅಭಿ ಹನಕೆರೆ ನಿರ್ದೇಶನದ 'ಆರಂಭ' ಚಿತ್ರದ ಒಂದು ಪ್ರಮುಖ ಪಾತ್ರ ಕುಂಟು ಬೋರನದು. ಚಿತ್ರದ ಹಲವೆಡೆ ಕುಂಟು ಬೋರ ತಮಟೆ ಬಡಿಯುವ ದೃಶ್ಯಗಳಿತ್ತು. ತಮಟೆ ಮೇಲೆ ಕೈ ಆಡಿಸುವ ರೀತಿಯನ್ನು, ದೇಹಭಾಷೆಯ ವ್ಯತ್ಯಾಸವನ್ನು ಅಧ್ಯಯನ ಮಾಡಲು ಕುಂಟು ಬೋರನ ಪಾತ್ರ ನಿರ್ವಹಿಸಿರುವ 'ರಸಗವಳ ನಾರಾಯಣ'ರವರನ್ನು ತಮಟೆ ಬಡಿಯುವವರ ಹತ್ತಿರವೇ ಕಳುಹಿಸಿದ್ದರಂತೆ. [ಆರಂಭ ಚಿತ್ರದ ಟೀಸರ್ ನಲ್ಲಿ ಇದೇನಿದು 'ಆ' ದೃಶ್ಯ?]

  A buffalo becomes victim for Kannada movie Aarambha

  ಕಲಿತು ವಾಪಸ್ಸಾದ ರಸಗವಳ ನಾರಾಯಣರಿಗೆ "ಎಲ್ಲಾದ್ರೂ ಹುಡುಕಿಕೊಂಡು ಒಂದು ಚರ್ಮದ ತಮಟೆಯನ್ನೇ ತರಬೇಕು" ಎಂದು ನಿರ್ದೇಶಕರು ತಾಕೀತು ಮಾಡಿದ್ದರು. ಎಲ್ಲೆಡೆಯೂ ಪ್ಲಾಸ್ಟಿಕ್ಕು, ಫೈಬರ್ರಿನ ತಮಟೆಯನ್ನೇ ನೋಡಿ ಕಂಗೆಟ್ಟರು ರಸಗವಳ ನಾರಾಯಣ! ಅಲ್ಲೊಂದಿಲ್ಲೊಂದಿದ್ದ ಚರ್ಮದ ತಮಟೆಯನ್ನು ಕೊಡಲು ಅದರ ಯಜಮಾನರು ಒಪ್ಪುತ್ತಿರಲಿಲ್ಲ! ಕೊನೆಗೆ ಕುಂಟು ಬೋರ ಒಂದು ಎಮ್ಮೆಯನ್ನು ಬಲಿಕೊಟ್ಟು ಅದರ ಚರ್ಮದಿಂದ ಹೊಸತೊಂದು ತಮಟೆಯನ್ನೇ ಮಾಡಿಸಿಕೊಂಡು ಚಿತ್ರೀಕರಣಕ್ಕೆ ಹಾಜರಾದರು!

  ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ, ಹಿನ್ನೆಲೆ ಸಂಗೀತ ನುಡಿಸುವಾಗ ನೈಜತೆಗಾಗಿ ಆ ಚರ್ಮದ ತಮಟೆಯನ್ನೇ ಬಳಸಿದರೆ ಒಳ್ಳೆಯದು ಎಂದು ತಮ್ಮ ಹಂಬಲವನ್ನು ಸಂಗೀತ ನಿರ್ದೇಶಕರಾದ ಗುರುಕಿರಣ್ ಹತ್ತಿರ ಅಭಿ ಹನಕೆರೆ ಹೇಳಿಕೊಂಡಾಗ, ಮತ್ತೆ ಅದೇ ತಮಟೆಯನ್ನು ತರಿಸಿ, ಲೈವ್ ರೆಕಾರ್ಡ್ ಮಾಡಿಸಿದ್ದಾರೆ.

  A buffalo becomes victim for Kannada movie Aarambha

  ರಸಗವಳ ನಾರಾಯಣನಿಗೆ ಮತ್ತೆ, ತಮಟೆ ತರಲು ಹೇಳಿದಾಗೆ, "ಮನೆಯಲ್ಲಿ ತಮಟೆಯನ್ನು ಇಟ್ಟುಕೊಂಡರೆ, ಕೆಟ್ಟಾದಾಗಬಹುದು ಎಂದು ಭಾವಿಸಿ, ಮದ್ದೂರಿನ ದೇವಸ್ತಾನದಲ್ಲಿ ಇರಿಸಿದ್ದನ್ನು ಕೇಳಿ, ನಿರ್ದೇಶಕರು "ಚಿತ್ರ ಚೆನ್ನಾಗಿ ಮೂಡಿಬರಲು, ನಮ್ಮ ಕೈಯಲ್ಲಿ ಎಷ್ಟು ಸಾಧ್ಯ, ಅಷ್ಟು ನೈಜವಾಗಿ ಮಾಡ್ಬೇಕು, ಇಲ್ಲಿ ಎಲ್ಲಾನೂ ಒಳ್ಳೇದಾಗುತ್ತೆ, ಕೆಟ್ಟದಾಗೋ ಮಾತೆ ಇಲ್ಲ" ಅಂತ ಅವರಿಗೆ ಹೇಳಿ, ಅವರಿಗೆ ಅದೇ ತಮಟೆಯಿಂದ ಬ್ಯಾಕ್ ಗ್ರೌಂಡ್ ಮ್ಯೂಸಿಕ್ ಮಾಡೋಣವೆಂದು, ಮತ್ತೆ ಅದೇ ತಮಟೆ ತರಿಸಿದ್ದಾರೆ.

  ಚಿತ್ರದಲ್ಲಿ ಉಪಯೋಗಿಸಿದ ಚರ್ಮದ ತಮಟೆಯನ್ನೇ ಬ್ಯಾಕ್ ಗ್ರೌಂಡ್ ಮ್ಯೂಸಿಕ್ಕಿನಲ್ಲೂ ಉಪಯೋಗಿಸಿರುವುದಕ್ಕೆ ಗುರುಕಿರಣ್ ಹರ್ಷ ವ್ಯಕ್ತಪಡಿಸುತ್ತಾ ಈ ರೀತಿಯ ಅನುಭವ ಇದೇ ಮೊದಲು ಎಂದಿದ್ದಾರೆ. ಕುಂಟು ಬೋರನ ಪಾತ್ರದ ಅಭಿನಯಕ್ಕೆ 'ರಸಗವಳ ನಾರಾಯಣ'ರಿಗೆ ಪ್ರಶಸ್ತಿಗಳ ಸುರಿಮಳೆಯೇ ಬಂದರೂ ಅಚ್ಚರಿ ಪಡಬೇಕಿಲ್ಲ ಎಂದು ಅಭಿ ಹೇಳುತ್ತಾರೆ.

  ಹಿನ್ನೆಲೆ ಸಂಗೀತವನ್ನು ಮುಗಿಸಿರುವ ಆರಂಭ ಚಿತ್ರವು ಸೆನ್ಸಾರಿಗೆ ತೆರಳಲು ತಯಾರಾಗಿದ್ದು, ಶೀಘ್ರದಲ್ಲೇ ತೆರೆ ಕಾಣಲಿದೆ. ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸಿ ಎಸ್ ಅಭಿ ಹನಕೆರೆ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ.

  English summary
  A buffalo becomes victim for Kannada movie 'Aarambha - Last Chance'. Actor 'Rasagavala Narayana' used tom-tom made up of buffalo skin for his 'Kuntu Bora' role. The movie directed by S Abhi Hanakere and produced by D Ganesh, V Nagenahalli.

  Kannada Photos

  Go to : More Photos

  ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Filmibeat sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Filmibeat website. However, you can change your cookie settings at any time. Learn more