ಸಿನಿಮಾ ಚಿತ್ರೀಕರಣ, ಪ್ರದರ್ಶನಕ್ಕೆ ಅನುಮತಿಗಾಗಿ ಮುಖ್ಯಮಂತ್ರಿಗೆ ನಿಯೋಗ ಮನವಿ

ಸುಮಾರು ಎರಡೂವರೆ ತಿಂಗಳಿನಿಂದ ಸಿನಿಮಾ ಚಿತ್ರೀಕರಣಗಳು ಸ್ಥಗಿತಗೊಂಡಿರುವುದರಿಂದ ಮತ್ತು ಪ್ರದರ್ಶನಗಳು ನಿಂತು ಹೋಗಿರುವುದರಿಂದ ಚಿತ್ರರಂಗ ಸಂಕಷ್ಟದಲ್ಲಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನೇತೃತ್ವದ ಚಿತ್ರರಂಗದ ಸದಸ್ಯರ ನಿಯೋಗವು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಸಲ್ಲಿಸಿತು.

Recommended Video

Ramesh Aravind ಕೊರೊನಾಗೆ ಹೊಂದಿಕೊಳ್ಳಲೇ ಬೇಕು ಎಂದು ಅದ್ಬುತವಾಗಿ ವಿವರಿಸಿದರು | Get Adjusted with Corona

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಸಾರಾ ಗೋವಿಂದು, ನಿರ್ಮಾಪಕ ಕೆ. ಮಂಜು, ಕೆ.ವಿ. ಚಂದ್ರಶೇಖರ್ ಸೇರಿದಂತೆ ಹಲವರ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅವರನ್ನು ಭೇಟಿ ಮಾಡಿತು.

ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ ನೀಡುವಂತೆ, ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅನುಮತಿ ಕೊಡುವಂತೆ ಹಾಗೂ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಲು ಚಿತ್ರರಂಗಕ್ಕೆ ಅನುದಾನ ನೀಡುವಂತೆ ನಿಯೋಗ ಮನವಿ ಸಲ್ಲಿಸಿತು.

A Delegation Of Kannada Film Industry Meets CM BS Yediyurappa

ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡುವ ಕುರಿತು ಭರವಸೆ ನೀಡಿದ್ದ ಮುಖ್ಯಮಂತ್ರಿ, ಚಿತ್ರೋದ್ಯಮಕ್ಕೆ ಅನುದಾನ ನೀಡುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದರು.

A Delegation Of Kannada Film Industry Meets CM BS Yediyurappa

ಜೂನ್ ಒಂದರಿಂದ ಎಲ್ಲಾ ರೀತಿಯ ಉದ್ಯಮ ಚಟುವಟಿಕೆಗಳು ಆರಂಭವಾಗುತ್ತಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ನಿರ್ಧಾರ ಮಾಡುವುದಾಗಿ ಅವರು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶಿಗಳಿಗೆ ಅನುಸಾರವಾಗಿಯೇ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

More from Filmibeat

English summary
A delegation of kannada film industry met CM BS Yediyurappa and requested him for permission to start film shooting, exhibition activities.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X