Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಠ' ಹೆಸರಿನಲ್ಲಿ ಬರ್ತಿದೆ ಮತ್ತೊಂದು ಸಿನಿಮಾ
'ಮಠ' ಸಿನಿಮಾವನ್ನು ಎಷ್ಟು ಬಾರಿ ನೋಡಿದರೂ ಬೇಸರ ಆಗುವುದಿಲ್ಲ ಎನ್ನುವ ಮಾತನ್ನು ಅನೇಕರು ಹೇಳುತ್ತಾರೆ. ಆದರೆ, ಇದೀಗ 'ಮಠ' ಸಿನಿಮಾ ಮತ್ತೆ ಸಿದ್ಧವಾಗುತ್ತಿದೆ. ಅರ್ಥಾತ್ 'ಮಠ' ಹೆಸರಿನ ಮತ್ತೊಂದು ಹೊಸ ಸಿನಿಮಾ ನಿರ್ಮಾಣ ಆಗುತ್ತಿದೆ.
'ಮಠ' ಎಂದ ಕೂಡಲೇ ನಟ ಜಗ್ಗೇಶ್ ಹಾಗೂ ನಿರ್ದೇಶಕ ಗುರು ಪ್ರಸಾದ್ ನೆನಪಿಗೆ ಬರುತ್ತಾರೆ. ಆದರೆ, ಈ ಮಠಕ್ಕೂ ಅವರಿಗೂ ಸಂಬಂಧ ಇಲ್ಲ. ರವೀಂದ್ರ ವೆಂಕಿ ಎನ್ನುವವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಸುನೀಲ್ ಪುರಾಣಿಕ್ ಆಯ್ಕೆ ನನಗೆ ಖುಷಿ ನೀಡಿಲ್ಲ- ಜೈಜಗದೀಶ್
ಸಂತೋಷ್ ದಾವಣಗೆರೆ ಈ ಸಿನಿಮಾದ ನಾಯಕನಾಗಿದ್ದಾರೆ. ಹೊಸ ವರ್ಷ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಹೊಸ ತಂಡದ ಜೊತೆಗೆ ಹಿರಿಯ ಕಲಾವಿದರು ಕೈ ಜೋಡಿಸಿದ್ದಾರೆ. ಸಿನಿಮಾದಲ್ಲಿ ಸಾಧುಕೋಕಿಲ, ಶರತ್ ಲೋಹಿತಾಶ್ವ, ಬ್ಯಾಂಕ್ ಜನಾರ್ಧನ್, ರಾಜು ತಾಳಿಕೋಟೆ ಹಾಗೂ ಗಿರಿ ಕಾಣಿಸಿಕೊಂಡಿದ್ದಾರೆ.
ಸತ್ಯ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಶ್ರೀಗುರು ಸಂಗೀತ, ಜೀವನ ಗೌಡ ಕ್ಯಾಮರಾ, ಸಿ ರವಿಚಂದ್ರನ್ ಸಂಕಲನ ಮಾಡಲಿದ್ದಾರೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಗೌಸ್ ಫೀರ್, ಪೆನ್ನಯ್ಯ ಹಾಡುಗಳನ್ನು ಬರೆಯಲಿದ್ದಾರೆ. ವಿ ಆರ್ ಕಂಬೈನ್ಸ್ ಬ್ಯಾನರ್ ನಲ್ಲಿ 'ಮಠ' ಸಿನಿಮಾ ನಿರ್ಮಾಣವಾಗುತ್ತಿದೆ.