'ಟಾಕ್ಸಿಕ್' ಚಿತ್ರದಲ್ಲಿ ಅಶ್ಲೀಲ ಕಂಟೆಂಟ್; ಟೀಸರ್‌ ರದ್ದು ಕೋರಿ AAP ಪಕ್ಷದಿಂದ ದೂರು

ನಾಲ್ಕೈದು ದಿನಗಳಿಂದ 'ಟಾಕ್ಸಿಕ್' ಸಿನಿಮಾ ಟೀಸರ್ ಸುದ್ದಿಯಲ್ಲಿದೆ. ಚಿತ್ರದಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಅಶ್ಲೀಲ ದೃಶ್ಯದ ಬಗ್ಗೆ ಈಗಾಗಲೇ ದೂರುಗಳು ದಾಖಲಾಗುತ್ತಿದೆ. ವಕೀಲರೊಬ್ಬರು ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದ ಇದೀಗ AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿ ಟೀಸರ್ ರದ್ದು ಮಾಡಬೇಕು ಎಂದು AAP ಪಕ್ಷದ ಮಹಿಳಾ ಕಾರ್ಯಕರ್ತರು ಮನವಿ ಮಾಡಿದೆ. ಬೆಂಗಳೂರಿನಲ್ಲಿರುವ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ನೀಡಿ ಮನವಿ ಮಾಡಿದ್ದಾರೆ. ಇಂತಹ ದೃಶ್ಯಗಳನ್ನು ತೋರಿಸುವುದರಿಂದ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

AAP Files Complaint Over Yash starrer Toxic Teaser romantic Scene Sparks Fresh Controversy

ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ 'ಟಾಕ್ಸಿಕ್' ಚಿತ್ರದ ಟೀಸರ್ ಬಿಡುಗಡೆ ಆಗಿತ್ತು. ಚಿತ್ರದಲ್ಲಿ ರಾಯ(ಯಶ್) ಪಾತ್ರ ಪರಿಚಯಿಸುವ ಸಣ್ಣ ಝಲಕ್ ಇದು. ಆದರೆ ರಾಯ ಎಂಟ್ರಿಗೂ ಮುನ್ನ ಕಾರ್ ಒಳಗೆ ಯುವತಿಯ ಜೊತೆ ರಮಿಸುವ ದೃಶ್ಯ ಇದೆ. ಅದು ಸಿಕ್ಕಾಪಟ್ಟೆ ವೈರಲ್ ಆಗಿ ಭಾರೀ ಚರ್ಚೆ ಹುಟ್ಟಾಕ್ಕಿದೆ. ಆ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಲೇ ಇದೆ. ವೈರಲ್ ವೀಡಿಯೋ ಬಗ್ಗೆ ವಕೀಲರಾದ ಲೋಹಿತ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಯಶ್ ಸಿನಿಮಾ ಎನ್ನುವ ಕಾರಣಕ್ಕೆ ಫ್ಯಾಮಿಲಿ ಸಮೇತ ಜನ ಸಿನಿಮಾ ನೋಡಲು ಬಯಸುತ್ತಾರೆ. ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ಕೊಡುತ್ತಾರೆ. ಆದರೆ ಟೀಸರ್‌ಗೆ ಅಂತ ಗೈಡ್‌ಲೈನ್ಸ್ ಯಾಕೆ ಇಲ್ಲ. ಯಶ್ ವಿರುದ್ಧ ನಮ್ಮ ಆರೋಪ ಇಲ್ಲ. ಆದರೆ ಈ ಟೀಸರ್‌ ಅನ್ನು ಆಧಾರವಾಗಿಟ್ಟುಕೊಂಡು ನಾನು ಹೋರಾಟ ನಡೆಸುತ್ತಿದ್ದೇನೆ ಎಂದು ವಕೀಲ ಲೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

ಟೀಕೆಗಳು ಏನೇ ಇದ್ದರೂ 'ಟಾಕ್ಸಿಕ್' ಟೀಸರ್ ಸೂಪರ್ ಹಿಟ್ ಆಗಿದೆ. ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರಲಿದೆ. ದೇಶ ವಿದೇಶದ ಭಾಷೆಗಳಿಗೆ 'ಟಾಕ್ಸಿಕ್' ಸಿನಿಮಾ ಡಬ್ ಆಗಿ ಬಿಡುಗಡೆ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಗೀತು ಮೋಹನ್ ದಾಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಮಾರ್ಚ್ 19ರಂದು ಬಾಲಿವುಡ್ ಸಿನಿಮಾ 'ಧುರಂಧರ್-2' ರಿಲೀಸ್ ಆಗ್ತಿದೆ. ಅದೇ ದಿನ 'ಟಾಕ್ಸಿಕ್' ಸಿನಿಮಾ ಕೂಡ ತೆರೆಗಪ್ಪಳಿಸಲಿದೆ. ಹಾಗಾಗಿ ಬಾಕ್ಸಾಫೀಸ್ ಕ್ಲ್ಯಾಶ್ ನಿರೀಕ್ಷಿಸಲಾಗ್ತಿದೆ. ಬರೀ ಕೆವಿಎನ್ ಯೂಟ್ಯೂಬ್ ಚಾನಲ್‌ನಲ್ಲಿ 84 ಮಿಲಿಯನ್‌ಗೂ ಹೆಚ್ಚು ವೀವ್ಸ್ ಸಾಧಿಸಿ ಟೀಸರ್ ದಾಖಲೆ ಬರೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಜೋರಾಗಿದೆ.

ನಯನತಾರಾ, ಕಿಯಾರಾ ಅದ್ವಾನಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ 'ಟಾಕ್ಸಿಕ್' ಚಿತ್ರದ ತಾರಾಗಣದಲ್ಲಿದ್ದಾರೆ. ಗೋವಾದಲ್ಲಿ ನಡೆಯುವ ಕಥೆಯನ್ನು ಚಿತ್ರದಲ್ಲಿ ಕಟ್ಟಿಕೊಡಲಾಗ್ತಿದೆ. 60-70ರ ದಶಕದ ಕಥೆಯನ್ನು ಚಿತ್ರದಲ್ಲಿ ಗೀತು ಮೋಹನ್ ದಾಸ್ ಹೇಳುತ್ತಿದ್ದಾರೆ. ಹಾಲಿವುಡ್ ತಂತ್ರಜ್ಞರು, ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. 300 ಕೋಟಿ ರೂ.ಗೂ ಅಧಿಕ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಸದ್ಯ ಟೀಸರ್ ಮಾತ್ರ ಬಿಡುಗಡೆ ಆಗಿದ್ದು ಮುಂದೆ ಟ್ರೈಲರ್, ಸಾಂಗ್ಸ್ ಬರಬೇಕಿದೆ.

More from Filmibeat

Read more about: toxic yash kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X