ಕುಡಿದ ಏಟಿನಲ್ಲಿ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಬಿಟ್ರಾ ದರ್ಶನ್? ಆರೋಪಿ ದೀಪಕ್ ಕೊಟ್ಟ ಹೇಳಿಕೆ ಏನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕ್ಷಣದಿಂದ ಕ್ಷಣಕ್ಕೆ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ಆರೋಪಿ ಸ್ಥಾನದಲ್ಲಿ ನಿಂತಿರುವ ದರ್ಶನ್ ವಿರುದ್ಧ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ದರ್ಶನ್‌ರನ್ನು ಸಿನಿಮಾರಂಗದಿಂದಲೇ ಬ್ಯಾನ್ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹ ಮಾಡುತ್ತಿದ್ದಾರೆ. ಇತ್ತ ಪೊಲೀಸರು ಮೇಲೂ ಆರೋಪಗಳು ಕೇಳಿಬರುತ್ತಿದೆ.
ಪೊಲೀಸರು ದರ್ಶನ್, ಪವಿತ್ರಾ ಗೌಡ ಹಾಗೂ 13 ಮಂದಿ ಆರೋಪಿಗಳನ್ನು ಕಸ್ಟಡಿಗೆ ಪಡೆದು ತನಿಖೆ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ದರ್ಶನ್ ಪೊಲೀಸರ ಕಸ್ಟಡಿಯಲ್ಲೇ ಇದ್ದಾರೆ. ನಿನ್ನೆ (ಜೂನ್ 12) ರೇಣುಕಾಸ್ವಾಮಿಯನ್ನು ಹತ್ಯೆಗೈದ ಸ್ಥಳ ಮಹಜರು ಕೂಡ ಮಾಡಲಾಗಿದೆ. ಈ ಬೆನ್ನೆಲ್ಲೆ ದರ್ಶನ್ ವಿರುದ್ಧ ಹೊಸ ಸುದ್ದಿಯೊಂದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ರೇಣುಕಾಸ್ವಾಮಿ ಪ್ರಾಥಮಿಕ ಮರಣೋತ್ತರ ಪರೀಕ್ಷೆ ಹೊರಬಿದ್ದಿದೆ. ಮೃತದೇಹದ ಸುಮಾರು 16 ಕಡೆಗಳಲ್ಲಿ ಪೆಟ್ಟುಗಳಾಗಿದ್ದು ಬೆಳಕಿಗೆ ಬಂದಿದೆ. ಹಾಗೇ ರೇಣುಕಾಸ್ವಾಮಿ ಮರ್ಮಾಂಗಕ್ಕೂ ಒದ್ದಿದ್ದು ಕನ್ಫರ್ಮ್ ಆಗಿತ್ತು. ಆ ಮಟ್ಟಿಗೆ ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಲಾಗಿತ್ತು. ಈಗ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ದರ್ಶನ್ ಎಂಬ ಸುದ್ದಿ ವರದಿಯಾಗಿದೆ.
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಲಾಗಿತ್ತು. ಬಳಿಕ ಬೆಂಗಳೂರಿಗೆ ಕರೆತಂದು ರಾಜರಾಜೇಶ್ವರಿ ನಗರದ ಶೆಡ್‌ನಲ್ಲಿ ಚಿತ್ರಹಿಂಸೆಯನ್ನು ನೀಡಲಾಗಿತ್ತು. ಈ ವೇಳೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ದರ್ಶನ್ ಕೋಪಗೊಂಡಿದ್ದರು. ಈ ವೇಳೆ ದರ್ಶನ್ ಅವರೇ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದಿದ್ದಾರೆಂಬ ಸ್ಟೋಟಕ ಮಾಹಿತಿ ಹೊರಬಿದ್ದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿರುವ ದೀಪಿಕ್ ಈ ಸ್ಟೋಟಕ ಮಾಹಿತಿಯನ್ನು ಹೊರಹಾಕಿದ್ದಾನೆ ಎನ್ನಲಾಗಿದೆ. ಈ ಹೇಳಿಕೆಯನ್ನು ಪೊಲೀಸರು ಸಾಕ್ಷಿಯಾಗಿ ಪರಿಗಣಿಸಿದ್ದಾರೆ. ಅಲ್ಲದೇ ದೀಪಿಕ್ ಅನ್ನು ದರ್ಶನ್ ವಿರುದ್ಧ ಸಾಕ್ಷಿಯಾಗಿ ಮಾಡಿದ್ದಾರೆ ಎನ್ನಲಾಗಿದೆ. ಇಂತಹ ಸುದ್ದಿ ಪೊಲೀಸ್ ವಲಯಗಳಿಂದ ಬಂದಿದೆ ಎಂದು ಮಾಧ್ಯಮಗಳಲ್ಲಿ ಹೊರಬಿದ್ದಿದೆ. ಈ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಸದ್ಯ ಅನ್ನಪೂರ್ಣೇಶ್ವರಿ ನಗರದ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇದೇ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತಮ್ಮ ಮೇಲೆ ಅನುಮಾನ ಬರುವಂತೆ ನಡೆದುಕೊಂಡಿದ್ದಾರೆ. ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲಾಗಿದೆ. ಠಾಣೆಯ ಒಳಗೆ ಏನು ನಡೆಯುತ್ತಿದೆ ಅನ್ನೋದು ಗೊತ್ತಾಗದ ಹಾಗೆ ಠಾಣೆಯನ್ನೇ ಕವರ್ ಮಾಡಲಾಗಿದೆ.
ಇನ್ನೊಂದು ಕಡೆ ದರ್ಶನ್ ಹಾಗೂ ಗ್ಯಾಂಗ್‌ಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ನೀಡಲಾಗುತ್ತಿದೆ ಎನ್ನಲಾಗಿದೆ. ಸಿಗರೇಟು ಸೇರಿದಂತೆ ಅವರು ಕೇಳಿದನ್ನು ಸಪ್ಲೈ ಮಾಡುತ್ತಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋದ ಸಮಯದಲ್ಲೂ ದರ್ಶನ್ ಗ್ಯಾಂಗ್‌ಗೆ ಪೊಲೀಸ್ ಸಿಬ್ಬಂದಿ ಫೋನ್ ಕೊಟ್ಟಿದ್ದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಇದೆಲ್ಲವೂ ನೋಡಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆಯೇ? ಎಂಬ ಅನುಮಾನ ಮೂಡಿದೆ.


Click it and Unblock the Notifications











