»   » ಕಾರು ಅಪಘಾತದಲ್ಲಿ ಗಾಯಗೊಂಡ ನಟ ಅನಂತನಾಗ್‌

ಕಾರು ಅಪಘಾತದಲ್ಲಿ ಗಾಯಗೊಂಡ ನಟ ಅನಂತನಾಗ್‌

Posted By:
Subscribe to Filmibeat Kannada

ಹಿರಿಯ ನಟ ಅನಂತನಾಗ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಮೈಸೂರಿನಿಂದ ಚಿತ್ರೀಕರಣ ಮುಗಿಸಿಕೊಂಡು ಬೆಂಗಳೂರಿಗೆ ಮರಳುವಾಗ ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ. ಅನಂತನಾಗ್ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ಪತ್ನಿ ಗಾಯತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ನಟ ದರ್ಶನ್ ಅಭಿನಯದ 'ಐರಾವತ' ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದ ಅನಂತನಾಗ್‌ ಅಲ್ಲಿಂದ ಡಿಸೆಂಬರ್ 25ರ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಮರಳುತ್ತಿದ್ದರು. 11 ಗಂಟೆ ಸುಮಾರಿಗೆ ರಾಮನಗರದ ಹೆಜ್ಜಾಲ ಬಳಿ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]

Ananth Nag

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಅನಂತನಾಗ್ ಅವರನ್ನು ನೋಡಿ ಮತ್ತೊಂದು ಕಾರಿನಲ್ಲಿ ಆಸ್ಪತ್ರೆಗೆ ಸೇರಿಸಲು ನೆರವು ನೀಡಿದರು. ಅನಂತನಾಗ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು ಪತ್ನಿ ಗಾಯತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅನಂತನಾಗ್ ಕಾರು ಚಾಲಕನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನಂತನಾಗ್ ಪ್ರಯಾಣಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಸರಣಿ ಅಪಘಾತ ನಡೆದು, ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಬಿಡದಿ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರವನ್ನು ಸುಗಮಗೊಳಿಸಿದರು.

English summary
Veteran actor Ananth Nag injured in car accident near Hejjala, Ramanarara. Ananth Nag returning to Bengaluru form Mysuru after shooting.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada