For Quick Alerts
  ALLOW NOTIFICATIONS  
  For Daily Alerts

  ನನ್ನ ಮಾತೃಭಾಷೆ, ನನ್ನ ಹೆಮ್ಮೆ: ಹಿಂದಿ ಹೇರಿಕೆ ವಿರುದ್ಧ ಪ್ರಕಾಶ್ ರೈ ಪ್ರತಿಕ್ರಿಯೆ

  |

  ಬಹುಭಾಷಾ ನಟ ಪ್ರಕಾಶ್ ರೈ ಹಿಂದಿ ಹೇರಿಕೆ ವಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಹಿಂದಿ ಹೇರಿಕೆ ವಿರುದ್ಧ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಒಂದಲ್ಲೊಂದು ರೀತಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಲೇ ಇದೆ.

  ಇದೀಗ ನಟ, ಪ್ರಕಾಶ್ ರೈ ಹಿಂದಿ ಹೇರಿಕೆ ವಿರುದ್ಧದ ಆಕ್ರೋಶಕ್ಕೆ ದನಿಗೂಡಿಸಿದ್ದಾರೆ. ಹಿಂದಿ ಹೇರಿಕೆ ವಿರುದ್ಧ ದನಿ ಎತ್ತಿರುವ ಪ್ರಕಾಶ್ ರೈ, ನನ್ನ ಹೆಮ್ಮೆ, ನನ್ನ ಮಾತೃಭಾಷೆ ಎಂದಿದ್ದಾರೆ.

  ಮಗನಿಗೆ ಪೊಲೀಸ್ ಖಾಕಿ ತೊಡಿಸಿ ಸಂಭ್ರಮಿಸಿದ ಪ್ರಕಾಶ್ ರೈ: ಕಾರಣ ಇದು

  "ಹಲವು ಭಾಷೆ ಬಲ್ಲೆ. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ. ಆದರೆ ನನ್ನ ಕಲಿಕೆ. ನನ್ನ ಗ್ರಹಿಕೆ. ನನ್ನ ಬೇರು. ನನ್ನ ಶಕ್ತಿ. ನನ್ನ ಹೆಮ್ಮೆ. ನನ್ನ ಮಾತೃಭಾಷೆ ಕನ್ನಡ ಹಿಂದಿ ಹೇರಿಕೆ ಬೇಡ" ಎಂದು ಟ್ವೀಟ್ ಮಾಡಿದ್ದಾರೆ. ಪ್ರಕಾಶ್ ರೈ ಮಾತಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಇನ್ನು ಕೆಲವರು ಪ್ರಕಾಶ್ ರೈ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ."

  'ಮತ್ತೆ ಯಾಕೆ ಹಿಂದಿ ಸಿನಿಮಾದಲ್ಲಿ ನಟಿಸ್ತಿಯಾ, ಅಲ್ಲಿ ಹಿಂದಿ ಮಾತಾಡ್ತಿಯಾ ಇಲ್ಲಾ ಬೇರೆ ಭಾಷೆ ಮಾತಾಡ್ತಿಯಾ.' ಎಂದು ಪ್ರಕಾಶ್ ರೈ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 'ಹಿಂದಿ ಹೇರಿಕೆ ಬೇಡ ಅಂತೀಯ, ನಿನ್ನ ಪ್ರೊಫೈಲ್ ಫೋಟೋದಲ್ಲಿ ಹಿಂದಿ ರಾರಾಜಿಸುತ್ತಿದೆ' ಎಂದು ಪ್ರಶ್ನಿಸುತ್ತಿದ್ದಾರೆ.

  ಹಿಂದಿ ಹೇರಿಕೆ ವಿರೋಧಿಸಿ ನಟ ಚೇತನ್, ವಸಿಷ್ಠ ಸಿಂಹ ಮತ್ತು ನಿಖಿಲ್ ಕುಮಾರ್ ಸಹ ಟ್ವೀಟ್ ಮಾಡಿದ್ದಾರೆ. 'ಪಠ್ಯಕ್ರಮದಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿರುವುದು ಶಾಲಾ ಮಕ್ಕಳಿಗೆ ಅನಗತ್ಯ ಹೊರೆಯಾಗಿದೆ. ಹಿಂದಿ ಕಲಿಕೆಗೆ ಮೀಸಲಿಡುವ ಸಮಯವನ್ನು ಜೀವನ ಕೌಶಲ್ಯಗಳನ್ನು ಕಲಿಯಲು ಉಪಯೋಗಿಸಿಕೊಳ್ಳಬಹುದು. ಇಂಗ್ಲಿಷ್ ಅನ್ನು ಇಡೀ ಜಗತ್ತು ಸಂಪರ್ಕ ಭಾಷೆಯಾಗಿ ಒಪ್ಪಿರುವಾಗ, ಮತ್ತೊಂದು ಸಂಪರ್ಕ ಭಾಷೆಯಾಗಿ ಹಿಂದಿಯ ಅವಶ್ಯಕತೆಯಿಲ್ಲ.' ಎಂದು ನಟ ನಿಖಿಲ್ ಟ್ವೀಟ್ ಮಾಡಿದ್ದಾರೆ.

  English summary
  Actor and Politician Prakash Raj reaction on hindi imposition. He says that my mother tongue is my pride.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X