twitter
    For Quick Alerts
    ALLOW NOTIFICATIONS  
    For Daily Alerts

    ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಎಂಗೆ ಪತ್ರ ಬರೆದ ನಟ ಚೇತನ್

    |

    ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಸ್ಮಶಾನ ಕಾರ್ಮಿಕರು ಸಹ ಕೋವಿಡ್ ವಾರಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ-ಹಗಲು ಚಿತಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

    Recommended Video

    Kotigobba 3 |100 ಕೋಟಿ ಗಳಿಸೋದು ಪಕ್ಕಾ ಆಯ್ತು | Filmibeat Kannada

    ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ-ಹೋರಾಟಗಾರ ಚೇತನ್ ಮುಖ್ಯಮಂತ್ರಿ ಹಾಗೂ ಸಮಾಜಕಲ್ಯಾಣ ಸಚಿವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

    Actor Chetan Kumar Request to CM to implement of demands of crematorium workers

    ಪತ್ರದಲ್ಲಿ ಏನಿದೆ?
    ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಸ್ಮಶಾನ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ...

    ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು
    - ವೈದ್ಯಕೀಯ ವಿಮೆ
    - ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ
    - ಆದ್ಯತೆಯ ವ್ಯಾಕ್ಸಿನೇಷನ್
    - ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮುಖವಾಡಗಳು
    - ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು
    - ಕೆಲಸದ ಹೊರೆ ಹೆಚ್ಚಿಗೆಯಾದ ಕಾಅರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

    ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು
    - 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.
    - ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.
    - ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.
    - ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.
    - ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.
    - ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.
    - ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

    ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಸಿಎಂ ಯಡಿಯೂರಪ್ಪ ಅವರಿಗೆ ವಿನಂತಿ ಮಾಡಿದ್ದಾರೆ.

    English summary
    Kannada actor-activist Chetan kumar requesting to CM to implementation of immediate and long-term demands of crematorium workers.
    Monday, May 17, 2021, 12:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X