BREAKING: ನಟ ಚಿರಂಜೀವಿ ಸರ್ಜಾ ಆಸ್ಪತ್ರೆಗೆ ದಾಖಲು
ನಟ ಚಿರಂಜೀವಿ ಸರ್ಜಾ ಅವರು ಉಸಿರಾಟದ ಸಮಸ್ಯೆಯಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಚಿರಂಜೀವಿ ಸರ್ಜಾ ಅವರು ಜಯನಗರದ ಸಾಗರ್ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿರಂಜೀವಿ ಸರ್ಜಾ ಅವರಗೆ ಅಪೋಲೋ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಚಿರು ಹೆಲ್ತ್ ರಿಪೋರ್ಟ್ ನೀಡಲಿದ್ದಾರೆ.

ಸುಮಾರು 22 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಚಿರಂಜೀವಿ ಸರ್ಜಾ ಈಗ ಏಕಾ-ಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ, ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ ಅವರ ಸಂಬಂಧಿಯಾಗಿರುವ ಚಿರಂಜೀವಿ ಸರ್ಜಾ ಧ್ರುವ ಸರ್ಜಾ ಅವರ ಅಣ್ಣ ಸಹ ಹೌದು.
More from Filmibeat
English summary
Kannada actor Chiranjeevi Sarja admitted to hospital in Jayangar. He is facing problem in breathing.


Click it and Unblock the Notifications











