ಪುನೀತ್ ಹುಟ್ಟುಹಬ್ಬ: ಅಪ್ಪುಗೆ ಶುಭಕೋರಿದ ಕಿಚ್ಚ-ದಚ್ಚು
ಸ್ಯಾಂಡಲ್ ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ನಟ ಪುನೀತ್ ಹುಟ್ಟುಹಬ್ಬವನ್ನು ಸರಳವಾಗಿ ಕುಟುಂಬದವರ ಜೊತೆ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ಕೊರೊನಾ ಆತಂಕದ ಕಾರಣ ಈ ವರ್ಷವೂ ಅಭಿಮಾನಿಗಳಿಗೆ ಮನೆಯ ಬಳಿ ಬರಬೇಡಿ ಎಂದು ಅಪ್ಪು ಮನವಿ ಮಾಡಿಕೊಂಡಿದ್ದರು. ಹುಟ್ಟುಹಬ್ಬದ ದಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ, ಮನೆಯಲ್ಲಿ ಇರಲ್ಲ ಎಂದು ಇತ್ತೀಚಿಗೆ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದರು.
ಹಾಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ಶುಭಾಶಯ ತಿಳಿಸುತ್ತಿದ್ದಾರೆ. ಅಭಿಮಾನಿಗಳ ಜೊತೆಗೆ ಪವರ್ ಸ್ಟಾರ್‌ಗೆ ಚಿತ್ರರಂಗದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ.

ಅಪ್ಪು ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಪುನೀತ್ ರಾಜ್ ಕುಮಾರ್ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಇನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ, ಹುಟ್ಟುಹಬ್ಬದ ಶಭಾಶಯಗಳು, ಒಳ್ಳೆಯದಾಗಲಿ ಎಂದು ಟ್ವೀಟ್ ಮಾಡಿದ್ದಾರೆ. ಚಿತ್ರರಂಗದ ಸಾಕಷ್ಟು ಗಣ್ಯರು ಅಪ್ಪುಗೆ ಶುಭಾಶಯ ಕೋರುತ್ತಿದ್ದಾರೆ.
ಹುಟ್ಟುಹಬ್ಬದ ವಿಶೇಷವಾಗಿ ಇಂದು ಜೇಮ್ಸ್ ಸಿನಿಮಾದಿಂದ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಜೊತೆಗೆ ನಿರ್ದೇಶಕ ಕೃಷ್ಣ ಮತ್ತು ದಿನಕರ್ ತೂಗುದೀಪ ಜೊತೆಗಿನ ಹೊಸ ಸಿನಿಮಾ ಅನೌನ್ಸ್ ಆಗಿದೆ. ಇದೆಲ್ಲದರ ಜೊತೆಗೆ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದು, ಏಪ್ರಿಲ್ 1ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.


Click it and Unblock the Notifications











