For Quick Alerts
  ALLOW NOTIFICATIONS  
  For Daily Alerts

  ಕನ್ನಡ ಬಾವುಟ ಸುಟ್ಟವರ ವಿರುದ್ಧ ನಟ ದರ್ಶನ್‌ ಆಕ್ರೋಶ!

  |

  ಎಂಇಎಸ್‌ನವರು ಪ್ರತಿಭಟನಾ ರ್‍ಯಾಲಿ ಮಾಡಿ, ಕನ್ನಡ ಪರ ಹೋರಾಟಗಾರರ ಮೇಲೆ ಕೊಲೆ ಯತ್ನ ದೂರು ದಾಖಲಿಸಿದರು. ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ.

  ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಸಿನಿಮಾ ತಾರೆಯರು ಈಗ ಅಖಾಡಕ್ಕೆ ಇಳಿದಿದ್ದಾರೆ.

  ನಟ ಜಗ್ಗೇಶ್, ಶಿವರಾಜ್‌ಕುಮಾರ್, ದುನಿಯಾ ವಿಜಯ್, ಪ್ರಜ್ವಲ್‌ ದೇವರಾಜ್, ಗಣೇಶ್, ವಿನೋದ್‌ ಪ್ರಭಾಕರ್‌, ದರ್ಶನ್‌ ಸೇರಿದಂತೆ ಹಲವು ತಾರೆಯರು ಕೆಂಡಾಮಂಡಲ ಆಗಿದ್ದಾರೆ.

  ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು: ನಟ ದರ್ಶನ್ ಆಕ್ರೋಶ!

  ಕನ್ನಡ ಬಾವುಟ ಸುಟ್ಟವರ ವಿರುದ್ಧ ನಟ ದರ್ಶನ್‌ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ" ಎಂದು ಬರೆದುಕೊಂಡು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

  ಕನ್ನಡ ಬಾವುಟವನ್ನು ಸುಟ್ಟು ಹಾಕಿದವರು ಹೇಡಿಗಳು ಎಂದು ಕಿಡಿಕಾರಿದ್ದಾರೆ ನಟ ದರ್ಶನ್. ಪ್ರತಿಭಟನೆ ವೇಳೆ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತ ಆಗುತ್ತಿದೆ. ಕನ್ನಡಿಗರು ಇದರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗ ಸಾಲು ಸಾಲಾಗಿ ಸಿನಿಮಾ ತಾರೆಯರು ಕೂಡ ಈ ಘಟನೆಯ ವಿರುದ್ಧ ಗುಡುಗುತ್ತಲಿದ್ದಾರೆ.

  English summary
  Actor Drashan Angry On People Who Burn Karnataka Flag And Demand Action Against Them,

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X