For Quick Alerts
  ALLOW NOTIFICATIONS  
  For Daily Alerts

  ಚಾಲೆಂಜಿಂಗ್ ಸ್ಟಾರ್ ವಿರುದ್ಧ ಗಂಭೀರ ಆರೋಪ: ಇಂದ್ರಜಿತ್ ನಿವಾಸಕ್ಕೆ ಭದ್ರತೆ

  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಹಾಕಲಾಗಿದೆ. ನಟ ದರ್ಶನ್ ನಿರ್ಮಾಪಕ, ಆಪ್ತ ಸಂದೇಶ್ ನಾಗರಾಜ್ ಅವರ ದಿ ಪ್ರಿನ್ಸ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅಂತ ಇಂದ್ರಜಿತ್ ಗಂಭೀರ ಆರೋಪ ಮಾಡಿದ್ದಾರೆ.

  ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದ್ರಜಿತ್ ಅವರ ಕೋರಮಂಗಲದ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಪ್ರಕರಣದ ಬೆನ್ನಲ್ಲೇ ಹಲ್ಲೆ ಆರೋಪ ಕೇಳಿಬಂದಿರುವುದು ಅಚ್ಚರಿ ಮೂಡಿಸಿದೆ.

  ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಇಂದ್ರಜಿತ್ ಲಂಕೇಶ್, ದರ್ಶನ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಮುಖ್ಯವಾಗಿ ದರ್ಶನ್ ಮತ್ತು ಟೀಂ ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಮಾಡಿರುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಈ ವೇಳೆ ದರ್ಶನ್ ಆಪ್ತೆ ಪವಿತ್ರಾ ಗೌಡ ಮತ್ತು ಇನ್ನಿಬ್ಬರು ಯುವತಿಯರು ಕೂಡ ಇದ್ದರು ಎಂದು ಹೇಳಿದ್ದಾರೆ.

  ದೊಡ್ಡವರ ಮಾತು ಕಥೆ, ಸತ್ಯ ಯಾವ್ದು..? ಸುಳ್ಳು ಯಾವ್ದು..? | Indrajit Lankesh vs Darshan | Filmibeat Kannada

  ಬಳಿಕ ರಾಜಿ ಸಂದಾನ ಮಾಡಿ ಕಳುಹಿಸಿದ್ದಾರೆ ಎಂದು ಇಂದ್ರಜಿತ್ ಹೇಳಿದ್ದಾರೆ. ಜೊತೆಗೆ ಮೈಸೂರು ಪೊಲೀಸರ ವಿರುದ್ಧವೂ ಇಂದ್ರಜಿತ್ ಆರೋಪ ಮಾಡಿದ್ದಾರೆ. ಪೊಲೀಸ್ ಸ್ಟೇಷನ್ ಸೆಟಲ್ ಮೆಂಟ್ ಅಡ್ಡಾಗಳಾಗಿವೆ, ಪೊಲೀಸರು ಕೈಗೆ ಬಳೆ ತೊಟ್ಟು ಕೂಳಿತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೂ ದೂರು ನೀಡಿ, ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

  English summary
  Actor Darshan Assault case: Tight security for Director Indrajit Lankesh house.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X