ಥಾಯ್ಲೆಂಡ್‌ನಿಂದ ಬೆಂಗಳೂರಿಗೆ ಬಂದಿಳಿದ ದರ್ಶನ್; ವೀಡಿಯೋ ವೈರಲ್

'ಡೆವಿಲ್' ಸಿನಿಮಾ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ ಪ್ರವಾಸ ಕೈಗೊಂಡಿದ್ದ ನಟ ದರ್ಶನ್ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. 10 ದಿನಗಳ ಬಳಿಕ ದರ್ಶನ್ ಬೆಂಗಳೂರಿಗೆ ಬಂದಿಳಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಕೂಡ ಜೊತೆಗಿದ್ದರು. ಹಾಡಿನ ಚಿತ್ರೀಕರಣಕ್ಕಾಗಿ ತಂಡ ವಿದೇಶಕ್ಕೆ ತೆರಳಿತ್ತು.

ಪ್ರಕಾಶ್ ವೀರ್ ನಿರ್ದೇಶನದ 'ಡೆವಿಲ್' ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿದೆ. ಅಕ್ಟೋಬರ್ ಕೊನೆಗೆ ಸಿನಿಮಾ ಬಿಡುಗಡೆ ಮಾಡುವ ಪ್ರಯತ್ನ ನಡೀತಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಕಷ್ಟ ಇನ್ನು ತಪ್ಪಿಲ್ಲ. ಮೊದಲಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸಾಂಗ್ ಶೂಟಿಂಗ್ ಪ್ಲ್ಯಾನ್ ಮಾಡಲಾಗಿತ್ತು. ಕ್ರಿಮಿನಲ್ ಬ್ಯಾಕ್‌ಗ್ರೌಂಡ್ ಹಿನ್ನೆಲೆಯಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಿಂದ ದರ್ಶನ್ ವೀಸಾ ನಿರಾಕರಿಸಲಾಗಿತ್ತು. ಹಾಗಾಗಿ ತಂಡ ಥಾಯ್ಲೆಂಡ್‌ಗೆ ತೆರಳಿತ್ತು.

Actor Darshan Back to Bengaluru Post Wrapping Devil film Shooting in thailand

ಸಂತು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಸಿಕ್ಕಾಪಟ್ಟೆ ಕಲರ್‌ಫುಲ್ ಆಗಿ ಸಾಂಗ್ ಶೂಟಿಂಗ್ ಮಾಡಲಾಗಿದೆ. ನಾಯಕಿ ರಚನಾ ರೈ ಜೊತೆ ದರ್ಶನ್ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಥಾಯ್ಲೆಂಟ್‌ ಸೆಟ್‌ನಲ್ಲಿ ಕ್ಲಿಕ್ಕಿಸಿದ್ದ ಫೋಟೊಗಳು ವೈರಲ್ ಆಗಿದ್ದವು. ಇನ್ನು ಅಲ್ಲಿ ಸ್ನೇಹಿತರ ಜೊತೆ ದರ್ಶನ್ ಪಾರ್ಟಿ ಮಾಡಿ ಸಖತ್ ಎಂಜಾಯ್ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಅಭಿಮಾನಿಗಳ ಗಮನ ಸೆಳೆದಿತ್ತು.

ಬಹಳ ಹಿಂದೆ 'ಡೆವಿಲ್' ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಕ್ತಾಯವಾಗಿತ್ತು. ಒಂದು ಹಾಡು ಹಾಗೂ ಒಂದಷ್ಟು ಮಾಂಟೇಜ್ ಚಿತ್ರೀಕರಣಕ್ಕಾಗಿ ತಂಡ ಥಾಯ್ಲೆಂಡ್‌ಗೆ ಹೋಗಿತ್ತು. ಇದೀಗ ಶೂಟಿಂಗ್ ಮುಗಿಸಿ ಬಂದಿದೆ. ಇನ್ನು ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರುವಾಗಲಿದೆ. ಮುಖ್ಯವಾಗಿ ಸಿಜಿ ವರ್ಕ್ ಹೆಚ್ಚು ಇದೆ. ಹಾಗಾಗಿ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲು ತಂಡ ಮೀನಾಮೇಷ ಎಣಿಸುತ್ತಿದೆ.

ಅಜನೀಶ್ ಲೋಕನಾಥ್ ಸಂಗೀತ ಚಿತ್ರದಲ್ಲಿ 'ಡೆವಿಲ್' ಸಾಂಗ್ಸ್ ಮೂಡಿ ಬಂದಿದೆ. ಶೀಘ್ರದಲ್ಲೇ ಚಿತ್ರದ ಒಂದೊಂದೇ ಲಿರಿಕಲ್ ವೀಡಿಯೋ ಸಾಂಗ್ ಹೊರ ಬರಲಿದೆ. ಮತ್ತೊಂದು ಕಡೆ ದರ್ಶನ್ ಜಾಮೀನು ಅರ್ಜಿಯ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇತ್ತೀಚೆಗೆ ನಡೀತು. ಎರಡೂ ವಾದ ಆಲಿಸಿದ ಕೋರ್ಟ್ ತೀರ್ಪಿನ ಆದೇಶ ಕಾಯ್ದಿರಿಸಿದೆ. ವಿಚಾರಣೆ ವೇಳೆ ನ್ಯಾಯಾಧೀಶರು ಕೇಳಿರುವ ಕೆಲ ಪ್ರಶ್ನೆಗಳು ದರ್ಶನ್ ಎದೆಯಲ್ಲಿ ನಡುಕ ಹುಟ್ಟಿಸಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ದರ್ಶನ್ ಜೈಲು ಸೇರಿದ್ದರು. ಬಳಿಕ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ನಂತರ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿತ್ತು. ಹೈಕೋರ್ಟ್‌ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್‌ನಲ್ಲಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ನಟ ದರ್ಶನ್ ಬಹಳ ಪ್ರಭಾವಿ. ಹಾಗಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕದಿಂದ ಜಾಮೀನು ರದ್ದುಪಡಿಸುವಂತೆ ಕೋರಿದ್ದರು.

ಜುಲೈ 24ರಂದು ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠದ ಎದುರು ಮೊದಲು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು. ಬಳಿಕ ದರ್ಶನ್ ಪರ ವಕೀಲ ಸಿದ್ದಾರ್ಥ್ ದಾವೆ ತಮ್ಮ ವಾದ ಮುಂದಿಟ್ಟರು.

ಒಂದು ವಾರದಲ್ಲಿ 3 ಪುಟಗಳ ಲಿಖಿತ ವಾದಾಂಶ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿ ಆದೇಶ ಕಾಯ್ದಿರಿಸಿದೆ. ದರ್ಶನ್‌ಗೆ ಜೈಲೋ? ಬೇಲೋ? ಎನ್ನುವ ಚರ್ಚೆ ಮತ್ತೆ ಶುರುವಾಗುವಂತಾಗಿದೆ.

More from Filmibeat

English summary
Darshan was spotted at the Bengaluru airport as he arrived back in town post his Devilm shoot in Thailand;
Read more about: darshan devil sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X