For Quick Alerts
  ALLOW NOTIFICATIONS  
  For Daily Alerts

  ಅಭಿಮಾನಿಗಳ 'ದಾಸ' ದರ್ಶನ್‌ಗೆ ಹುಟ್ಟುಹಬ್ಬದ ಸಂಭ್ರಮ

  |

  ನಟ ದರ್ಶನ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ, ದರ್ಶನ್‌ ಅವರ ಕೋಟ್ಯಂತರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ.

  ಫೆಬ್ರವರಿ 16, 1977 ರಲ್ಲಿ ಜನಿಸಿದ ನಟ ದರ್ಶನ್‌ ಇಂದು 44 ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

  ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಹಾಗೆ ಆಗುತ್ತಿಲ್ಲ.

  ಸ್ವತಃ ದರ್ಶನ್ ಹೇಳಿರುವಂತೆ ಕೊರೊನಾ ಕಾರಣದಿಂದಾಗಿ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್‌ಬುಕ್‌ ಲೈವ್‌ನಲ್ಲಿ ಮನವಿ ಮಾಡಿದ್ದರು.

  ದರ್ಶನ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಹಲವಾರು ಸ್ಟಾರ್ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.

  ದಾಸನ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ ಸ್ಟಾರ್ ಗಳು | Filmibeat Kannada

  ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂಬರುವ ಸಿನಿಮಾ ರಾಬರ್ಟ್‌ನ ಟ್ರೇಲರ್ ಬಿಡುಗಡೆ ಆಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ರಾಬರ್ಟ್ ಟ್ರೇಲರ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ.

  English summary
  Actor Darshan celebrating his 44th birthday on February 16. He requested fans to not come near his house for celebration this year.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X