6 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
Recommended Video

ಮೈಸೂರಿನ ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮಧ್ಯಾಹ್ನ 4 ಗಂಟೆಯ ವೇಳೆಗೆ ದರ್ಶನ್ ಅವರ ಡಿಸ್ಚಾರ್ಜ್ ಪ್ರಕ್ರಿಯೆಗಳು ಮುಗಿದಿವೆ.
ಕಳೆದ ಸೋಮವಾರ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್, ರಾಯ್ ಆಂಟೋನಿ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ಅಪಘಾತಕ್ಕಿಡಾಗಿದ್ದರು. ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು.
ಘಟನೆಯ ಬಳಿಕ ನಾಲ್ಕು ಜನರು ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಗುರುವಾರ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಡಿಸ್ಜಾರ್ಜ್ ಆಗಿದ್ದು, ನಿನ್ನೆ ರಾಯ್ ಆಂಟೋನಿ ಡಿಸ್ಚಾರ್ಜ್ ಆಗಿದ್ದರು. ಇಂದು ದರ್ಶನ್ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.

ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ದರ್ಶನ್ ಅವರ ಬಲಗೈನಲ್ಲಿ ಪ್ಲೇಟ್ ಹಾಕಲಾಗಿದೆಯಂತೆ. ಹೀಗಾಗಿ, ಅವರು ಹೆಚ್ಚು ಭಾರದ ವಸ್ತುಗಳನ್ನು ಕೆಲದಿನಗಳ ಕಾಲ ಎತ್ತುವ ಹಾಗಿಲ್ಲ ಎಂದು ವೈದ್ಯರು ಸೂಚನೆ ನೀಡಿದ್ದಾರಂತೆ.
ಅಂದಹಾಗೆ, ದರ್ಶನ್ ಆರೋಗ್ಯವಾಗಿ ಬರಲಿ ಎಂದು ಇಡೀ ಕನ್ನಡ ಚಿತ್ರರಂಗ ಹಾಗೂ ಅವರ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ನಿರ್ದೇಶಕ ತರುಣ್ ಸುಧೀರ್, ಸಂದೇಶ್ ನಾಗರಾಜ್, ನಟ ಪ್ರೇಮ್, ರವಿಶಂಕರ್, ಬುಲೆಟ್ ಪ್ರಕಾಶ್ ಸೇರಿದಂತೆ ಅನೇಕರು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿದ್ದರು.


Click it and Unblock the Notifications











