ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಳಿಕ ಪವಿತ್ರಾ ಗೌಡ ಪೊಲೀಸರ ವಶಕ್ಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್.ಆರ್.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಅಪರಿಚತ ವ್ಯಕ್ತಿ ಕೊಲೆ ಪ್ರಕರಣ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಆತನ ಹಿನ್ನೆಲೆ ಗೊತ್ತಾಗಿತ್ತು. ಬಳಿಕ ಕೊಲೆಗೆ ಕಾರಣ, ಅಪರಾಧಿಗಳು ಯಾರು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಟ ದರ್ಶನ್ ಹೆಸರು ಕೇಳಿಬಂದಿತ್ತು.

ದರ್ಶನ್ ಗೆಳತಿ ಪವಿತ್ರಾ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟ ಕಾಮೆಂಟ್‌ಗಳನ್ನು ಹಾಕುತ್ತಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಸದ್ಯ ಅಣ್ಣಪೂರ್ಣೇಶ್ವರಿ ನಗ ಪೊಲೀಸ್ ಠಾಣೆಗೆ ಪವಿತ್ರಾ ಗೌಡ ಅವರನ್ನು ಕರೆದೊಯ್ಯಲಾಗಿದೆ.
ನಟ ದರ್ಶನ್ ಜೊತೆಗೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇರುವುದಾಗಿ ಇತ್ತೀಚೆಗೆ ನಟಿ ಪವಿತ್ರಾ ಗೌಡ ಹೇಳಿದ್ದರು. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ದರು. ಇವರಿಬ್ಬರ ಸೋಶಿಯಲ್ ಮೀಡಿಯಾ ಏಟು ತಿರುಗೇಟು ಭಾರೀ ಸದ್ದು ಮಾಡಿತ್ತು.
'ಜಗ್ಗುದಾದ' ಸಿನಿಮಾ ಚಿತ್ರೀಕರಣದ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಪರಿಚಯವಾಗಿತ್ತು. ಬಳಿಕ ಆತ್ಮೀಯ ಒಡನಾಟ ಇತ್ತು. ದರ್ಶನ್ ಜೊತೆಗೆ ಇರುವ ಕೆಲ ಫೋಟೊಗಳನ್ನು ಆಗಾಗ್ಗೆ ಪವಿತ್ರಾ ಗೌಡ ಪೋಸ್ಟ್ ಮಾಡುತ್ತಿದ್ದರು. ಆದರೆ ಇತ್ತೀಚೆಗಷ್ಟೆ ಅಧಿಕೃತವಾಗಿ ತಮ್ಮಿಬ್ಬರ ರಿಲೇಷನ್‌ಶಿಪ್ ಬಗ್ಗೆ ಪವಿತ್ರಾ ಗೌಡ ಬಹಿರಂಗವಾಗಿ ಹೇಳಿಕೊಂಡಿದ್ದರು.


Click it and Unblock the Notifications











