For Quick Alerts
  ALLOW NOTIFICATIONS  
  For Daily Alerts

  ದರ್ಶನ್ ಹೊಸ 'ಪ್ಯಾನ್ ಇಂಡಿಯಾ' ಸಿನಿಮಾದ ಹೆಸರು ಘೋಷಣೆ

  |

  ನಟ ದರ್ಶನ್‌ ಅಭಿನಯದ ಹೊಸ ಸಿನಿಮಾದ ಹೆಸರು ಇಂದು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಘೋಷಿಸಲಾಗಿದೆ.

  ಗಣಪತಿ ಹಬ್ಬಕ್ಕೆ ಕಿಕ್ ಕೊಟ್ಟ ಡಿ ಬಾಸ್, ಅಭಿಮಾನಿಗಳಿಗೆ ಹಬ್ಬ

  ದರ್ಶನ್ ಅಭಿನಯಿಸುತ್ತಿರುವ 55ನೇ ಸಿನಿಮಾ ಇದಾಗಿದ್ದು, ಸಿನಿಮಾಕ್ಕೆ 'ಕ್ರಾಂತಿ' ಎಂದು ಹೆಸರಿಡಲಾಗಿದೆ. ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದ್ದು, ಐದೂ ಭಾಷೆಗಳಲ್ಲಿ ಸಿನಿಮಾದ ಹೆಸರುಳ್ಳ ಪೋಸ್ಟರ್‌ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.

  ಇಂದು ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ ದರ್ಶನ್‌ರ ಆಂಗ್ರಿ ಲುಕ್‌ನ ಚಿತ್ರ ಗಮನ ಸೆಳೆಯುತ್ತಿದೆ. ಜೊತೆಗೆ ಕಾರೊಂದು ವೇಗವಾಗಿ ಹೋಗುತ್ತಿರುವ ಚಿತ್ರವೂ ಇದೆ. ಜೊತೆಗೆ ವಿಮಾನ, ಹೆಲಿಕಾಪ್ಟರ್‌ಗಳ ಚಿತ್ರವೂ ಇದೆ. ಪೋಸ್ಟರ್‌ ನೋಡಿದರೆ ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಎಂಬುದು ಅರಿವಾಗುತ್ತದೆ.

  ದರ್ಶನ್ ಅಭಿನಯಿಸುತ್ತಿರುವ 'ಕ್ರಾಂತಿ' ಸಿನಿಮಾವನ್ನು ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದು, ಶೈಲಜಾ ನಾಗ್ ಮತ್ತು ಬಿ ಸುರೇಶ್ ನಿರ್ಮಾಣ ಮಾಡುತ್ತಿದ್ದಾರೆ. ದರ್ಶನ್ ನಟಿಸಿದ್ದ 'ಯಜಮಾನ' ಚಿತ್ರವನ್ನೂ ಸಹ ಇದೇ ತಂಡ ನಿರ್ಮಾಣ ಮಾಡಿತ್ತು. ವಿ.ಹರಿಕೃಷ್ಣಗೆ ನಿರ್ದೇಶಕರಾಗಿ ಇದು ಎರಡನೇ ಸಿನಿಮಾ. ಸಂಗೀತ ನಿರ್ದೇಶನವನ್ನೂ ಅವರೇ ಮಾಡಲಿದ್ದಾರೆ.

  ದರ್ಶನ್ ಕೊನೆಯದಾಗಿ ರಾಬರ್ಟ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸಾಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು ರಾಬರ್ಟ್ ಸಿನಿಮಾ. ಈ ಚಿತ್ರಕ್ಕೆ ಉಮಾಪತಿ ಶ್ರಿನಿವಾಸ್ ಬಂಡವಾಳ ಹೂಡಿದ್ದರು. ಈ ಸಿನಿಮಾ ಬಳಿಕ ದರ್ಶನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಹೆಚ್ಚಾಗಿತ್ತು. ಇದೀಗ ಕುತೂಹಲಕ್ಕೆ ತೆರೆಬಿದ್ದಿದ್ದು, ಈ ಹಿಂದೆ ಹಿಟ್ ಸಿನಿಮಾ ನೀಡಿದ್ದ ತಂಡದೊಂದಿಗೆ ದರ್ಶನ್ ಮತ್ತೆ ಕೈಜೋಡಿಸಿದ್ದಾರೆ.

  'ರಾಬರ್ಟ್' ಬಳಿಕ ದರ್ಶನ್ 'ರಾಜವೀರ ಮದಕರಿನಾಯಕ' ಹೆಸರಿನ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದರು. ಸಿನಿಮಾದ ಕೆಲ ಭಾಗಗಳ ಚಿತ್ರೀಕರಣವೂ ಆಗಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾದ ಚಿತ್ರೀಕರಣ ಸ್ಥಗಿತವಾಗಿದೆ. ಈ ಸಿನಿಮಾವನ್ನು ಹಿರಿಯ ನಿರ್ದೇಶಕ ರಾಜೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಬಂಡವಾಳವನ್ನು ಹಿರಿಯ ನಿರ್ಮಾಪಕ ರಾಕ್‌ಲೈವ್ ವೆಂಕಟೇಶ್ ಹೂಡಿದ್ದಾರೆ. ಸಿನಿಮಾದ ಚಿತ್ರೀಕರಣ ಸ್ಥಗಿತಗೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

  English summary
  Actor Darshan's multilingual 55th Movie Titled Kranti. V Harikrishna directing the movie, Shaylaga Nag and B Suresh produing.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X