ಸೆಲೆಬ್ರಿಟಿಸ್‌ಗೆ ಧನ್ಯವಾದ ಹೇಳಿ ಹಿತ ಶತ್ರುಗಳಿಗೆ ಸ್ಟ್ರಾಂಗ್ ಮೆಸೇಜ್ ಕೊಟ್ಟ ನಟ ದರ್ಶನ್: ಏನಿದು ಹೊಸ ಚರ್ಚೆ?
ಕಾಟೇರ ಸಿನಿಮಾ ಕರುನಾಡಿನಲ್ಲಿ ಮಾತ್ರವಲ್ಲದೇ ದೇಶ ವಿದೇಶಗಳಲ್ಲಿಯೂ ಸದ್ದು ಮಾಡುತ್ತಿದೆ. ಕನ್ನಡದ ಸಿನಿಮಾ ಎಂದು ಕರ್ನಾಟಕದಲ್ಲಿ ಮಾತ್ರ ಬಿಡುಗಡೆಯಾಗಿದ್ದ ಸಿನಿಮಾ ಈಗ ದುಬೈನಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಬಂದಿದೆ. ಇದರ ಬೆನ್ನಲ್ಲೆ ನಟ ತನ್ನ ಹಿತ ಶತ್ರುಗಳಿಗೆ ಸ್ಟ್ರಾಂಗ್ ಮೆಸೇಜ್ ನೀಡಿದ್ದಾರೆ.
ದುಬೈನಲ್ಲಿ 'ಕಾಟೇರ' ಪ್ರಚಾರದಲ್ಲಿ ನಟ ದರ್ಶನ್ ತೂಗುದೀಪ ತೊಡಗಿಸಿಕೊಂಡಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಜೊತೆಗೆ ಸೇರಿ ದುಬೈನಲ್ಲಿ ಸಿನಿಮಾಗೆ ಭರ್ಜರಿ ಪ್ರಚಾರ ನೀಡುತ್ತಿದ್ದಾರೆ. ಇದೇ ವೇಳೆ ಮಂಗಳವಾರ ಸಂಜೆ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಭರ್ಜರಿ ಚರ್ಚೆ ಹುಟ್ಟುಹಾಕಿದೆ.

ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ!
ಸದ್ಯ ಕಾಟೇರ ಸಿನಿಮಾ ಭರ್ಜರಿ ಗೆಲುವು ದಾಖಲಿಸಿದೆ. ಜೊತೆಗೆ ದುಬೈನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕೂಡ ಪಡೆಯುತ್ತಿದೆ. ಇದೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಈಗ ಎರಡಕ್ಕೂ ಹೊಂದಿಕೆಯಾಗಯವಂತೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
ಕಾಟೇರನ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು ಮತ್ತು ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಎಲ್ಲೆಡೆ ಬರುತ್ತಿರುವ ಕಾಮೆಂಟ್‌ಗಳಿಗೆ ಅಭಾರಿ ಎಂದಿದ್ದಾರೆ."ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ" ಎಂದಿದ್ದಾರೆ.
ಮುಂದುವರಿದು, ತಮ್ಮ ಹಿತ ಶತ್ರುಗಳಿಗೂ ಒಂದು ಸ್ಟ್ರಾಂಗ್ ಮೆಸೇಜ್ ಕೂಡ ನೀಡಿದ್ದಾರೆ. ಅದು ತಣ್ಣಗೆ... "ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ" ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ನಟ ದರ್ಶನ್ ಅವರು ಕಾಟೇರ ಸಿನಿಮಾ ಸಂಭ್ರಮವನ್ನು ಚಿತ್ರರಂಗದ ಸೆಲಬ್ರಿಟಿಗಳ ಜೊತೆಗೆ ಆಚರಿಸಿದ್ದರು. ಸೆಲಬ್ರಿಟಿ ಶೋ ಬಳಿಕ ದೊಡ್ಡ ಪಾರ್ಟಿ ಮಾಡಿದ್ದರು. ಇದು ಮಧ್ಯರಾತ್ರಿ ನಿಯಮ ಮೀರಿ ಪಾರ್ಟಿ ಮಾಡಿದ ಕಾರಣ ದರ್ಶನ್ ಸೇರಿದಂತೆ ಹಲವು ಮಂದಿಗೆ ನೋಟಿಸ್ ನೀಡಲಾಗಿದೆ. ದುಬೈನಿಂದ ಬಂದ ಬಳಿಕ ವಿಚಾರಣೆ ನಟ ಹಾಜರಾಗಲಿದ್ದಾರೆ. ಇದೇ ಕಾರಣಕ್ಕೆ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.


Click it and Unblock the Notifications











