ದೆಹಲಿ ಹಿಂಸಾಚಾರ: ಸ್ಯಾಂಡಲ್ ವುಡ್ ನಟ ಧನಂಜಯ್ ಪ್ರತಿಕ್ರಿಯೆ

ರಾಷ್ಟ್ರ ರಾಜಧಾನಿ ದೆಹಲಿ ಹೊತ್ತಿ ಉರಿಯುತ್ತಿದೆ. ದೆಹಲಿ ಹಿಂಸಾಚಾರ ಮೂರನೆ ದಿನಕ್ಕೆ ಕಾಲಿಟ್ಟಿದ್ದು ಗಲಭೆಯಲ್ಲಿ ಸುಮಾರು 20 ಜನ ಮೃತಪಟ್ಟಿದ್ದಾರೆ. ದೆಹಲಿ ಹಿಂಸಾಚಾರದ ಬಗ್ಗೆ ಬಾಲಿವುಡ್ ಕಲಾವಿದರು ಸೇರಿದಂತೆ ಬೇರೆ ಬೇರೆ ಭಾಷೆಯ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಹಿಂಸಾಚಾರ ಖಂಡಿಸಿ ಟ್ವೀಟ್ ಮಾಡುತ್ತಿದ್ದಾರೆ.

ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. "ಸೂರ್ಯಕಾಂತಿಯ ನೋಡಿ ಕಲಿಯಿರಿ ಎಂದೆ ಧರ್ಮದತ್ತ ವಾಲಿದರು. ಹೊಳೆಯ ನಿಶ್ಯಬ್ದತೆಯೆಡೆಗೆ ನಡೆಯಿರಿ ಎಂದೆ ಗುಂಡಿನ ಶಬ್ದಕ್ಕೆ ಮಾರು ಹೋದರು. ಸೂರ್ಯ ಮುಳುಗುತ್ತಿದ್ದಾನೆ. ಹೊಳೆ ಹೆಪ್ಪುಗಟ್ಟುತ್ತಿದೆ. ಎಂದು ಹೇಳಿದ್ದಾರೆ.

ಧನಂಜಯ್ ಮಾಡಿರುವ ಟ್ವೀಟ್ ನಲ್ಲಿ ದೆಹಲಿ ಹಿಂಸಾಚಾರದ ಬಗ್ಗೆ ಎಲ್ಲಿಯೂ ಉಲ್ಲೇಖಿಸದಿದ್ದರು ಈ ವಾಕ್ಯಗಳು ದೆಹಲಿ ಹಿಂಸಾಚಾರದ ಬಗ್ಗೆ ಹೇಳುತ್ತಿದೆ ಎಂದು ಗೊತ್ತಾಗುತ್ತಿದೆ. ಧನಂಜಯ್ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 Actor Dhananjay React To Delhi Violence

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಆರಂಭವಾದ ಹಿಂಸಾಚಾರ ಬಳಿಕ ತೀವ್ರಗೊಂಡಿತ್ತು. ನಂತರ ಹಲವೆಡೆ ನಡೆದ ಗಲಭೆಯಲ್ಲಿ ಅನೇಕರು ಮೃತಪಟ್ಟಿದ್ದು, 190ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಾಲಿವುಡ್ ಸ್ಟಾರ್ ರಿಚಾ ಚಡ್ಡಾ, ರವೀನಾ ಟಂಡನ್, ಸ್ವಾರಾ ಭಾಸ್ಕರ್, ಇಶಾ ಗುಪ್ತ, ಹನ್ಸಲ್ ಮೆಹ್ತಾ ಸೇರಿದಂತೆ ಸಾಕಷ್ಟು ಮಂದಿ ಸ್ಟಾರ್ಸ್ ಖಂಡಿಸಿ ಟ್ವೀಟ್ ಮಾಡಿದ್ದಾರೆ.

More from Filmibeat

English summary
Kannada Actor Dhananjay react to Delhi violence. Richa chadda, Raveena Tandon, Esha Gupta and other stars react to Delhi violence.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X