ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಬ್ಬರು ಹೋಂ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು.

Recommended Video

Kannad Gothilla :ರಚಿತಾ ರಾಮ್ ಚಾನ್ಸ್ ಮಿಸ್ ಮಾಡ್ಕೊಂಡ್ರು ಹರಿಪ್ರಿಯಾ ಕ್ಯಾಚ್ ಹಾಕೊಂಡ್ರು |Mayuraa Raghavendra

ಧ್ರುವ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಬಹಿರಂಗ ಪಡಿಸುತ್ತಿದ್ದಂತೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸೋಂಕಿನ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಧ್ರುವ ಆಪ್ತರು ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ನಂತರ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದರು. ಆದರೆ ಸೋಂಕಿನ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದ್ದ ಕಾರಣ ಸಂಜೆಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಣ್ಣನನ್ನು ಕಳೆದುಕೊಂಡು ದುಃಖದಲ್ಲಿದ್ದ ಧ್ರುವಗೆ ಈಗ ಮತ್ತೊಂದು ಸಂಕಷ್ಟ ಎದುರಾಗುವುದು ನೋಡಿ ಅಭಿಮಾನಿಗಳು ದುಃಖವ್ಯಕ್ತಪಡಿಸುತ್ತಿದ್ದಾರೆ.

Actor Dhruva Sarja And His Wife Prerana Discharged From Hospital

ಧ್ರುವ ಸರ್ಜಾ ಕುಟುಂಬದವರು ಎಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಸೋಂಕಿನ ಯಾವುದೆ ಲಕ್ಷಣಗಳು ಕಂಡುಬಂದಿಲ್ಲ, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಧ್ರುವ ಸರ್ಜಾ ಆಪ್ತ ವಲಯ ತಿಳಿಸಿದೆ.

'ನಾನು ಮತ್ತು ನನ್ನ ಪತ್ನಿ ಇಬ್ಬರಲ್ಲಿಯೂ ಕೊರೊನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇಬ್ಬರಲ್ಲಿಯೂ ಸಣ್ಣ ಪ್ರಮಾಣದಲ್ಲಿ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ನಾವು ಆಸ್ಪತ್ರೆಗೆ ದಾಖಲಾಗಿದ್ದೇವೆ. ನಾವು ಹುಷಾರಾಗಿ ಮರಳಲಿದ್ದೇವೆ ಎಂಬ ನಂಬಿಕೆಯಿದೆ. ಈ ಸಮಯದಲ್ಲಿ ನಮ್ಮೊಂದಿಗೆ ಸಂಪರ್ಕದಲ್ಲಿ ಯಾರು ಬಂದಿದ್ದೀರೋ ನೀವೆಲ್ಲರೂ ಕೊರೊನಾ ವೈರಸ್ ತಪಾಸಣೆಗೆ ಒಳಗಾಗಿ ಮತ್ತು ಸುರಕ್ಷಿತರಾಗಿರಿ' ಎಂದು ಧ್ರುವ ಮನವಿ ಮಾಡಿದ್ದರು.

More from Filmibeat

English summary
Actor Dhruva Sarja and his wife Prerana discharged from hospital. After corona positive Dhruva and Prerana Admitted hospital.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X