For Quick Alerts
  ALLOW NOTIFICATIONS  
  For Daily Alerts

  ವಿಜಯ್ ದೇವರಕೊಂಡ ಬಳಿಕ ಧ್ರುವ ಸರ್ಜಾಗೆ ಪುರಿ ಜಗನ್ನಾಥ್ ನಿರ್ದೇಶನ

  |

  ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಸದ್ಯ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇಸ್ಮಾರ್ಟ್ ಶಂಕರ್ ಯಶಸ್ಸಿನ ಬಳಿಕ ಪುರಿ ಜಗನ್ನಾಥ್ ಲೈಗರ್ ಮೂಲಕ ತೆಲುಗು ಮಾತ್ರವಲ್ಲದೆ ಹಿಂದಿಗೆ ಮತ್ತೆ ಕಾಲಿಟ್ಟಿದ್ದಾರೆ.

  Dhruva Sarja ಮುಂದಿನ ಸಿನಿಮಾ ತೆಲುಗಿನ ಸ್ಟಾರ್ ಡೈರೆಕ್ಟರ್ ಜೊತೆ | Filmibeat Kannada

  ಲೈಗರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಈ ನಡುವೆ ಪುರಿ ಜಗನ್ನಾಥ್ ಮುಂದಿನ ಸಿನಿಮಾದ ಬಗ್ಗೆ ಚರ್ಚೆಯಾಗುತ್ತಿದೆ. ಪುರಿ ಜಗನ್ನಾಥ್ ಮತ್ತೆ ಕನ್ನಡ ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿ ಹೇಳಿಬರುತ್ತಿದೆ.

  ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

  ಕನ್ನಡದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಪುರಿ ಜಗನ್ನಾಥ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎನ್ನುವ ಮಾತುಗಳು ಟಾಲಿವುಡ್ ಮತ್ತು ಸ್ಯಾಂಡಲ್ ವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈಗಾಗಲೇ ಧ್ರುವ ಸರ್ಜಾ ಮತ್ತು ಪುರಿ ಜಗನ್ನಾಥ್ ನಡುವೆ ಮಾತುಕತೆಯಾಗಿದ್ದು, ಧ್ರುವ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಇನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

  ಅಂದಹಾಗೆ ಪುರಿ ಜಗನ್ನಾಥ್ ಕನ್ನಡದಲ್ಲಿ ಕೊನೆಯದಾಗಿ ರೋಗ್ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಇದೀಗ ಮತ್ತೆ ಕನ್ನಡ ಚಿತ್ರರಂಗದ ಕಡೆ ಮುಖಮಾಡುತ್ತಿದ್ದು, ಧ್ರುವ ಸರ್ಜಾಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ದಕ್ಷಿಣ ಭಾರತ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲೂ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

  ಧ್ರುವ ಸರ್ಜಾ ಸದ್ಯ ''ದುಬಾರಿ'' ಸಿನಿಮಾದಲ್ಲಿ ನಿರತರಾಗಿದ್ದಾರೆ. ಪೊಗರು ಬಳಿಕ ಮತ್ತೆ ನಂದಕಿಶೋರ್ ಜೊತೆ ಸಿನಿಮಾ ಮಾಡುತ್ತಿದ್ದು, ದುಬಾರಿ ಎಂದು ಶೀರ್ಷಿಕೆ ಇಡಲಾಗಿದೆ. ಸದ್ಯದಲ್ಲೇ ದುಬಾರಿ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ.

  English summary
  Actor Dhruva sarja and Telugu Puri Jagannadh team up for new film.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X