ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾರು ಅಪಘಾತ
Recommended Video
ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬಳ್ಳಾರಿಯಲ್ಲಿ ಚಿತ್ರೀಕರಣ ಮುಗಿಸಿ ಧ್ರುವ ತಂಗಿದ್ದ ಹೋಟೆಲ್ ಗೆ ವಾಪಾಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಧ್ರುವ ಸರ್ಜಾ ಮತ್ತು ಸ್ನೇಹಿತರು ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಧ್ರುವ ಸರ್ಜಾ ಸದ್ಯ ಪೊಗರು ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಪೊಗರು ಚಿತ್ರದ ಚಿತ್ರೀಕರಣ ಸದ್ಯ ಬಳ್ಳಾರಿಯಲ್ಲಿ ನಡೆಯುತ್ತಿದೆ. ನಿನ್ನೆ ತಡರಾತ್ರವರೆಗೂ ತೋರಣಗಲ್ಲು ಬಳಿ ಚಿತ್ರೀಕರಣ ಮುಗಿಸಿ ವಾಪಾಸ್ ಕುಡ್ತನಿಗೆ ಬರುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಧ್ರುವ ಸರ್ಜಾ ಮತ್ತು ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಧ್ರುವ ಸರ್ಜಾ ಇದ್ದ ವಾಹನ ಪರಿಚಿದಂತೆ ಆಗಿದೆ. ಇಂದು ಚಿತ್ರೀಕರಣದ ನಡುವೆಯು ಇಡೀ ಚಿತ್ರತಂಡ ಬಳ್ಳಾರಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರಂತೆ. ಕಳೆದ 15 ದಿನಗಳಿಂದ ಪೊಗರು ಚಿತ್ರತಂಡ ಬಳ್ಳಾರಿಯಲ್ಲಿ ಚಿತ್ರೀಕರಣ ಮಾಡುತ್ತಿದೆ.

ಪೊಗರು ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. ಧ್ರುವ ಸರ್ಜಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಹ್ಯಾಟ್ರಿಕ್ ಹಿಟ್ ನೀಡಿರುವ ಧ್ರುವ ಈಗ ಮತ್ತೊಂದು ಹಿಟ್ ಸಿನಿಮಾಗಾಗಿ ಖಾದಾಡುತ್ತಿದ್ದಾರೆ.


Click it and Unblock the Notifications











