ಫೋಟೋ ವೈರಲ್; ಬೀಚ್ ನಲ್ಲಿ ದಿಗಂತ್ ಮತ್ತು ಐಂದ್ರಿತಾ ದಂಪತಿಯ ಮಸ್ತಿ
ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ದಿಗಂತ್ ಮತ್ತು ಐಂದ್ರಿತಾ ರೇ ದಂಪತಿ ಸದ್ಯ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ದಿಗಂತ್ ಚಿತ್ರೀಕರಣದ ನಡುವೆಯೂ ಪತ್ನಿಯ ಜೊತೆ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ.
ದಿಗಂತ್ ಮತ್ತ ಐಂದ್ರಿತಾ ಸದ್ಯ ಮಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಇತ್ತೀಚಿಗಷ್ಟೆ ದಿಗಂತ್ ದಂಪತಿ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ವಾರ್ಷಿಕೋತ್ಸವದ ಸಂಭ್ರಮಾಚರಣೆಗೆ ವಿದೇಶಕ್ಕೆ ಹೋಗುವ ಪ್ಲಾನ್ ಕೈಬಿಟ್ಟು, ಕರ್ನಾಟಕದ ಸುಂದರ ಪ್ರದೇಶಗಳಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ದಿಗಂತ್ ದಂಪತಿಗೆ ಅಡ್ವೆಂಚರ್, ಸ್ಪೋರ್ಟ್ಸ, ಸೈಕ್ಲಿಂಗ್ ಎಂದರೆ ತುಂಬಾ ಇಷ್ಟ. ಸದಾ ಪ್ರವಾಸ ಮಾಡುತ್ತ ಲೈಫ್ ಎಂಜಾಯ್ ಮಾಡುತ್ತಿರುವ ಈ ಜೋಡಿ, ಇದೀಗ ಮುಲ್ಕಿಯಲ್ಲಿದ್ದಾರೆ. ಮುಲ್ಕಿಯ ಸರ್ಫಿಂಗ್ ಕೋರ್ಸ್ ಗೆ ಸೇರಿಕೊಂಡಿದ್ದಾರೆ. ಇಬ್ಬರು ಸರ್ಫಿಂಗ್ ತರಬೇತಿಯಲ್ಲಿರುವ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ದಿಗಂತ್ ದಂಪತಿಯ ಸಾಹಸ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ದೂದ್ ಪೇಡ ದಂಪತಿ ಸದ್ಯ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 8 ವರ್ಷಗಳ ಬಳಿಕ ಈ ಜೋಡಿ ಒಟ್ಟಿಗೆ ತೆರೆಮೇಲೆ ಕಾಣಿಸುಕೊಳ್ಳುತ್ತಿದ್ದಾರೆ.
ಚಿತ್ರದಲ್ಲಿ ದಿಗಂತ್ ಅಡಿಕೆ ಬೆಳೆಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಇಂಥ ಪಾತ್ರದಲ್ಲಿ ದಿಗಂತ್ ನಟಿಸುತ್ತಿದ್ದು, ಈಗಾಗಲೇ ಚಿತ್ರೀಕರಣದ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಲೆನಾಡಿನ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೂ ಇದೇ ನಡುವೆ ದಿಗಂತ್ ಮಾರಿ ಗೋಲ್ಡ್ ಸಿನಿಮಾದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈ ಸಿನಿಮಾಗಳ ಜೊತೆಗೆ ವೇರ್ ಈಸ್ ಮೈ ಕನ್ನಡಕ, ಗಾಳಿಪಟ-2 ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.


Click it and Unblock the Notifications











