ನಟ, ನಿರ್ದೇಶಕ ಕಾಶಿನಾಥ್ ವಿಧಿವಶ
Recommended Video

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ. ಚಾಮರಾಜಪೇಟೆಯ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಟ ಕಾಶಿನಾಥ್ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಕಾಶಿನಾಥ್ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ವರ್ಷ ಕಾಶಿನಾಥ್ 'ಚೌಕ' ಸಿನಿಮಾದಲ್ಲಿ ಅಭಿನಯಿಸಿದ್ದರು. ಆ ಸಮಯದಲ್ಲೇ ಕಾಶಿನಾಥ್ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಕಾಶಿನಾಥ್ ಅವರಿಗೆ ಇಬ್ಬರು ಮಕ್ಕಳಿದ್ದು ಮಗ ಅಭಿಮನ್ಯು ಸಿನಿಮಾರಂಗದಲ್ಲಿ ನಾಯಕನಾಗಿ ಗುರುತಿಸಿಕೊಂಡಿದ್ದರು. ಪುತ್ರಿ ಅಮೃತವರ್ಷಿಣಿ ವಿದೇಶದಲ್ಲಿ ವಾಸವಿದ್ದು ಸದ್ಯ ತಂದೆ ಸಾವಿನ ಸುದ್ದಿ ತಿಳಿದ ನಂತ್ರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಕಾಶಿನಾಥ್ ಬಳುತ್ತಿದ್ದರು.

ಕಾಶಿನಾಥ್ ಅಗಲಿಕೆ ಕನ್ನಡ ಸಿನಿಮಾರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಸದ್ಯ ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಎ.ಪಿ.ಎಸ್ ಕಾಲೇಜ್ ಗ್ರೌಂಡ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಾಮರಾಜಪೇಟೆಯ ಟಿ.ಆರ್.ಮಿಲ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


Click it and Unblock the Notifications











