For Quick Alerts
  ALLOW NOTIFICATIONS  
  For Daily Alerts

  ದುನಿಯಾ ವಿಜಯ್‌ಗೆ 49ನೇ ಹುಟ್ಟುಹಬ್ಬದ ಸಂಭ್ರಮ; ಹುಟ್ಟೂರಿನಲ್ಲೇ ಹುಟ್ಟುಹಬ್ಬ ಆಚರಣೆ

  |

  ನಟ ದುನಿಯಾ ವಿಜಯ್ ಅವರಿಗೆ ಇಂದು ( ಜನವರಿ 20 ) 49ನೇ ಹುಟ್ಟುಹಬ್ಬದ ಸಂಭ್ರಮ. 1974ರ ಜನವರಿ 20ರಂದು ಆನೇಕಲ್ ತಾಲೂಕಿನ ಕುಂಬಾರನಹಳ್ಳಿ ಗ್ರಾಮದಲ್ಲಿ ಜನಿಸಿದ ವಿಜಯ್ ಕುಮಾರ್ ಬಿ ಆರ್ ನಟನಾಗಿ ಬಡ್ತಿ ಪಡೆದುಕೊಂಡು ನಟಿಸಿದ ಮೊದಲ ಚಿತ್ರ ದುನಿಯಾ ಭರ್ಜರಿ ಯಶಸ್ಸು ಗಳಿಸಿದ ಕಾರಣ ಇವರಿಗೆ ದುನಿಯಾ ವಿಜಯ್ ಎಂದೇ ಕರೆಯಲ್ಪಡುತ್ತಿದ್ದಾರೆ.

  ಇನ್ನು ಇಷ್ಟು ವರ್ಷಗಳ ಕಾಲ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿನ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ನಟ ದುನಿಯಾ ವಿಜಯ್ ಈ ಬಾರಿ ತನ್ನ ಹುಟ್ಟೂರಾದ ಆನೇಕಲ್‌ನ ಕುಂಬಾರನಹಳ್ಳಿಯಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ತಂದೆ ತಾಯಿಯರ ಸಮಾಧಿ ನಿರ್ಮಿಸಿ ಅದರ ಮೇಲೆ ಅವರ ಪುಟ್ಟ ಪುತ್ಥಳಿಯನ್ನು ವಿಜಯ್ ಸ್ಥಾಪಿಸಿದ್ದು, ಆ ಜಾಗಕ್ಕೆ 'ದುನಿಯಾ ರುಣ' ಎಂಬ ಹೆಸರನ್ನು ಇಟ್ಟಿದ್ದಾರೆ.

  ಇದೇ ಜಾಗದಲ್ಲಿ ದುನಿಯಾ ವಿಜಯ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಗೂ ಸಹ ಇಲ್ಲಿಗೆ ಭೇಟಿ ನೀಡಲು ಅವಕಾಶ ನೀಡಿದ್ದಾರೆ. ಇನ್ನು ಹುಟ್ಟುಹಬ್ಬದ ಪ್ರಯುಕ್ತ ತಾವೇ ನಿರ್ದೇಶನ ಮಾಡುತ್ತಿರುವ ಎರಡನೇ ಚಿತ್ರ ಭೀಮದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದ್ದು, ದುನಿಯಾ ವಿಜಯ್ ಮತ್ತೊಮ್ಮೆ ರಗಡ್ ರೌಡಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.

  2004ರಲ್ಲಿ ತೆರೆಕಂಡ ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕಿಚ್ಚ ಸುದೀಪ್ ನಟನೆಯ ರಂಗ ಎಸ್ಎಸ್ಎಲ್‌ಸಿ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದುನಿಯಾ ವಿಜಯ್ ನಂತರ ಶಿವ ರಾಜ್‌ಕುಮಾರ್ ನಟನೆಯ ರಿಷಿ, ಜೋಗಿ, ರಾಕ್ಷಸ ಹಾಗೂ ಇತರೆ ನಟರ ಹಲವು ಚಿತ್ರಗಳಲ್ಲಿ ಪುಟ್ಟ ಖಳನಟನಾಗಿ ಕಾಣಿಸಿಕೊಂಡಿದ್ದರು. ಬಳಿಕ 2007ರಲ್ಲಿ ತೆರೆಕಂಡ ಸೂರಿ ನಿರ್ದೇಶನದ ದುನಿಯಾ ಚಿತ್ರದಲ್ಲಿ ನಾಯಕನಾಗಿ ಮೊಟ್ಟ ಮೊದಲ ಬಾರಿಗೆ ಬಣ್ಣ ಹಚ್ಚಿದ ದುನಿಯಾ ವಿಜಯ್ ಫಸ್ಟ್ ಬಾಲ್ ಸಿಕ್ಸರ್ ಬಾರಿಸಿ ಅಭಿಮಾನಿಗಳ ಮನಸ್ಸಿನಲ್ಲಿ ತನ್ನ ಅದ್ಭುತ ನಟನೆಯಿಂದ ಖಾಯಂ ಸ್ಥಾನ ಗಿಟ್ಟಿಸಿಕೊಂಡರು. ಅಂದಿನಿಂದ ಇಂದಿನವರೆಗೂ ಸಾಲು ಸಾಲು ಚಿತ್ರಗಳಲ್ಲಿ ನಟಿಸಿರುವ ದುನಿಯಾ ವಿಜಯ್ ಇಂದು ಸ್ವತಃ ತಾವೇ ನಿರ್ದೇಶನ ಮಾಡಿ ಸಲಗ ರೀತಿಯ ಸೂಪರ್ ಹಿಟ್ ಚಿತ್ರವನ್ನೂ ಸಹ ನೀಡಿದ್ದಾರೆ ಹಾಗೂ ಪರಭಾಷಾ ಚಿತ್ರಗಳಲ್ಲೂ ಅಭಿನಯಿಸುತ್ತಿದ್ದಾರೆ.

  English summary
  Actor Duniya Vijay celebrating his 49th birthday in his native
  Friday, January 20, 2023, 8:07
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X