Ganesh: ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್- ಕಟ್ಟಡ ಕಾಮಗಾರಿ ನಿಲ್ಲಿಸುವಂತೆ ಸೂಚನೆ

By ಚಾಮರಾಜನಗರ ಪ್ರತಿನಿಧಿ

ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಗಣೇಶ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿಗಳು ಗಣೇಶ್‌ಗೆ ನೋಟಿಸ್ ನೀಡಿದ್ದು, ಮುಂದಿನ ಏಳು ದಿನಗಳ ಒಳಗೆ ಸೂಕ್ತ ದಾಖಲಾತಿ ಒದಗಿಸಬೇಕು ಹಾಗೂ ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಜಕ್ಕಳ್ಳಿ ಗ್ರಾಮದ ಸರ್ವೇ ನಂ. 105ರಲ್ಲಿ 1.24 ಎಕರೆ ಜಮೀನು ಖರೀದಿಸಿರುವ ನಟ ಗಣೇಶ್ ಸ್ವಂತ ವಾಸಕ್ಕೆ ಮನೆ ಹಾಗೂ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದಾರೆ. ಅರಣ್ಯ ಅಧಿಕಾರಿಗಳು 2022ರ ಜೂನ್‌ನಲ್ಲಿ ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಅನುಮತಿ ನೀಡಿದ್ದರು. ಆದರೆ ಈಗ ಆ ಜಾಗದಲ್ಲಿ ಬೃಹತ್ ಕಟ್ಟಡ ನಿರ್ಮಾಣದ ಆರೋಪ ಕೇಳಿಬಂದಿದೆ. ಜೆಸಿಬಿ ಮೂಲಕ ದೊಡ್ಡ ಮಟ್ಟದ ಕೆಲಸ ನಡೆಯುತ್ತಿದ್ದು, ರೆಸಾರ್ಟ್ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ‌. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಆ ರೀತಿಯ ಕಟ್ಟಡಕ್ಕೆ ಅವಕಾಶವಿಲ್ಲ. ಹಾಗಾಗಿ ನೋಟಿಸ್ ಜಾರಿಯಾಗಿದೆ.

Actor Ganesh gets notice from forest department over illegal construction

ನಟ ಗಣೇಶ್ ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡ ಜಾಗದಲ್ಲಿ ಬೃಹತ್ ಕಟ್ಟಣ ನಿರ್ಮಾಣ ಮಾಡುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಅರಣ್ಯ‌ ಇಲಾಖೆ ಮಾಹಿತಿ ಕೇಳಿದೆ. ಮುಚ್ಚಳಿಕೆ ಪತ್ರ, ಕಂದಾಯ ದಾಖಲಾತಿ ಸೇರಿದಂತೆ ಜಮೀನಿಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಏಳು ದಿನಗಳ ಒಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲಿವರೆಗೆ ಕೆಲಸ ನಿಲ್ಲಿಸುವಂತೆಯೂ ಆದೇಶಿಸಲಾಗಿದೆ.

ಇನ್ನು ನೋಟಿಸ್‌ನಲ್ಲಿ ಏನಿದೆ ಅನ್ನುವುದನ್ನು ನೋಡುವುದಾದರೆ ಬಂಡೀಪುರ ಅಭಯಾರಣ್ಯ ಸೂಕ್ಷ್ಮ ವಲಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ನೀಡಿರುವ ನಿಬಂಧನೆ ಹಾಗೂ ನೀವು ಬರೆದುಕೊಟ್ಟ ಮುಚ್ಚಳಿಕೆ ಪತ್ರದಲ್ಲಿ ತಿಳಿಸಿರುವಂತೆ ಕಟ್ಟಡ ನಿರ್ಮಾಣ ನಡೆಯುತ್ತಿಲ್ಲ. ಮೇಲ್ನೋಟಕ್ಕೆ ಇದು ಗಮನಕ್ಕೆ ಬಂದಿದೆ. ಹಾಗಾಗಿ ಈ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಎಲ್ಲಾ ದಾಖಲೆಗಳನ್ನು 7 ದಿನಗಳ ಒಳಗೆ ಸಲ್ಲಿಸಬೇಕು. ಮುಂದಿನ ಆದೇಶದವರಗೂ ಕಾಮಗಾರಿ ನಡೆಯಬಾರದು ಎಂದು ತಿಳಿಸಲಾಗಿದೆ.

ಸಿನಿಮಾಗಳ ವಿಚಾರಕ್ಕೆ ಬಂದರೆ ಗಣೇಶ್ ನಟನೆಯ 'ಬಾನ ದಾರಿಯಲ್ಲಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇನ್ನು 'ದಂಡುಪಾಳ್ಯ' ಸಿನಿಮಾ ಖ್ಯಾತಿಯ ಶ್ರೀನಿವಾಸ್ ರಾಜು ನಿರ್ದೇಶನದ 'ಕೃಷ್ಣಂ ಪ್ರಣಯ ಸಖಿ' ಚಿತ್ರದಲ್ಲಿ ಗಣೇಶ್ ಬಣ್ಣ ಹಚ್ಚಿದ್ದಾರೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಚಿತ್ರಕ್ಕಿದೆ. ಗಣೇಶ್ ಜೋಡಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ.

ಸತತ ಸೋಲುಗಳಿಂದ ಕಂಗೆಟ್ಟಿದ್ದ ನಟ ಗಣೇಶ್ ಕಳೆದ ವರ್ಷ 'ಗಾಳಿಪಟ- 2' ಸಿನಿಮಾದಿಂದ ಕಂಬ್ಯಾಕ್ ಮಾಡಿದ್ದರು. ಆದರೆ ಬಳಿಕ ಬಂದ 'ತ್ರಿಬಲ್ ರೈಡಿಂಗ್' ಸಿನಿಮಾ ಮುಗ್ಗರಿಸಿತ್ತು. ಮಾರ್ಚ್ 18ಕ್ಕೆ ಬರಬೇಕಿದ್ದ 'ಬಾನ ದಾರಿಯಲ್ಲಿ' ಸಿನಿಮಾ ಯಾಕೋ ರಿಲೀಸ್ ಆಗಲೇ ಇಲ್ಲ. ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬರಬೇಕಿದ್ದ ಸಿನಿಮಾ 'ಕಬ್ಜ' ರಿಲೀಸ್ ಹಿನ್ನಲೆ ಮುಂದಕ್ಕೆ ಹೋಗಿತ್ತು.

More from Filmibeat

English summary
forest department issued notice to actor Ganesh over alleged illegal construction work.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X