For Quick Alerts
  ALLOW NOTIFICATIONS  
  For Daily Alerts

  ಆರ್‌ಎಸ್‌ಎಸ್‌ ಅಂದ್ರೆ ಏನು? ಸಂಘದ ಬಗ್ಗೆ ನಟ ಜಗ್ಗೇಶ್ ವಿವರಿಸಿದ್ದು ಹೀಗೆ

  |

  ಮಾಜಿ ಮುಖ್ಯಮಂತ್ರಿ ಹಾಗೂ ಚಲನಚಿತ್ರ ನಿರ್ಮಾಪಕ ಎಚ್‌ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಬಗ್ಗೆ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಕುಮಾರಸ್ವಾಮಿ ಅವರ ಈ ಹೇಳಿಕೆ ಬೆನ್ನಲ್ಲೆ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ಸಂಘಟನೆಯಿಂದ ಬಂದವರು ಎಚ್‌ಡಿಕೆ ಹೇಳಿಕೆಯನ್ನು ಖಂಡಿಸಿದ್ದಾರೆ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

  ಇದೀಗ, ನಟ-ರಾಜಕಾರಣಿ ಜಗ್ಗೇಶ್ ಅವರು ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಆರ್‌ಎಸ್‌ಎಸ್ ಅಂದ್ರೆ ಏನೆಂದು ವಿವರಿಸುವ ಪ್ರಯತ್ನ ಮಾಡಿದ್ದಾರೆ.

  ಕೇಶವಕೃಪಾ ಡೈರೆಕ್ಷನ್‌ನಲ್ಲಿ ಸಿಎಂ ಬೊಮ್ಮಾಯಿ ಸರಕಾರ; ಮೋದಿಯೂ ಆರ್‌ಎಸ್‌ಎಸ್ ಕೀಲುಗೊಂಬೆ

  ''ನಾನು ಕಂಡ ಅರ್ ಎಸ್ ಎಸ್ (ಓಂ, ಕ್ರೈಸ್ತ, ಅಲ್ಲಾ ಚಿಹ್ನೆ) ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೊರೊನಾ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿಧ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು ಒಂದೇ ಆರ್ ಎಸ್ ಎಸ್'' ಎಂದಿದ್ದಾರೆ. ಮುಂದೆ ಓದಿ...

  ದೂರ ನಿಂತು ಬೆಟ್ಟ ನೋಡುವರಿಗು ಅರ್ಥವಾಗಲ್ಲ

  ದೂರ ನಿಂತು ಬೆಟ್ಟ ನೋಡುವರಿಗು ಅರ್ಥವಾಗಲ್ಲ

  ಮಾತು ಮುಂದುವರಿಸಿ, ''ಯಾರಿಗೆ ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥ ಬಿಟ್ಟು ಸಮಾಜಕ್ಕೆ ಹೆಗಲು ಕೊಡುವ ಕರ್ಮಯೋಗಿ ಆಗುತ್ತಾನೆ. ದೂರ ನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯತಾಸ ವುಂಟು. ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ ಸಂಘವಿದು'' ಎಂದು ಸಮರ್ಥಿಸಿಕೊಂಡಿದ್ದಾರೆ.

  ಸಂಘದ ನಿಸ್ವಾರ್ಥ ಗುಣ ಅರಿಯಿರಿ

  ಸಂಘದ ನಿಸ್ವಾರ್ಥ ಗುಣ ಅರಿಯಿರಿ

  ಮತ್ತೊಂದು ಟ್ವೀಟ್‌ನಲ್ಲಿ, ''ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿಧ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೇ ಮನೆ ದೇಶವಾಸಿಗಳೇ ಬಂಧುಗಳು ಅವರ ನಿಸ್ವಾರ್ಥ ಸಮಾಜ ಸೇವೆಯೇ ದೇವರ ಪೂಜೆ. ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥ ಗುಣ ಅರಿಯಿರಿ'' ಎಂದು ತಿರುಗೇಟು ಕೊಟ್ಟಿದ್ದಾರೆ.

  ಕುಮಾರಸ್ವಾಮಿ ಏನು ಹೇಳಿದ್ದರು

  ಕುಮಾರಸ್ವಾಮಿ ಏನು ಹೇಳಿದ್ದರು

  ಬಿಡದಿಯ ತೋಟದಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಪರ್ವ ಕಾರ್ಯಗಾರ ನಡೆಯುತ್ತಿದೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ''ಕಳೆದ ಹಲವು ದಿನಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ, ಆ ಸಂಘಟನೆ ಹೇಗೆ ಕೆಲಸ ಮಾಡುತ್ತಿದೆ, ಚುನಾಯಿತ ಸರ್ಕಾರವನ್ನು ಹೇಗೆ ಕಪಿಮುಷ್ಠಿಯಲ್ಲಿಟ್ಟುಕೊಳ್ಳುತ್ತದೆ ಎಂದು ತಿಳಿದು ನನಗೆ ಆಘಾತವಾಯಿತು. ಪ್ರಧಾನಿ ಮೋದಿ ಆರ್‌ಎಸ್‌ಎಸ್ ಕೀಲುಗೊಂಬೆ, ರಾಜ್ಯದಲ್ಲೂ ಸಂಪೂರ್ಣವಾಗಿ ಆರ್‌ಎಸ್‌ಎಸ್‌ ಸರ್ಕಾರ ಇದೆ'' ಎಂದಿದ್ದರು. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಹಲವು ಬಿಜೆಪಿ ನಾಯಕರು ಖಂಡಿಸಿದರು.

  ಸತ್ಯ ಜನರ ಮುಂದಿಡುವುದು ಅತ್ಯಂತ ಅಗತ್ಯ

  ಸತ್ಯ ಜನರ ಮುಂದಿಡುವುದು ಅತ್ಯಂತ ಅಗತ್ಯ

  ''ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ. ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ. ಪ್ರಸ್ತುತ ದೇಶ ಹೋಗುತ್ತಿರುವ ಹಾದಿ ನೋಡಿದರೆ ಜನರ ಮುಂದೆ ಸತ್ಯ ಇಡುವುದು ಅತ್ಯಂತ ಅಗತ್ಯವೆಂದು ನನಗೆ ಅನಿಸಿತು. ವಾಸ್ತವವಾಗಿ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ'' ಎಂದು ಹೇಳುವ ಮೂಲಕ ತಮ್ಮ ಆರ್‌ಎಸ್‌ಎಸ್ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

  English summary
  Kannada Actor Jaggesh expresses his opinion about RSS (Rashtriya Swayamsevak Sangh).

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X