For Quick Alerts
  ALLOW NOTIFICATIONS  
  For Daily Alerts

  ಜರ್ಮನ್ ಕನ್ನಡಿಗನನ್ನು ಭೇಟಿಯಾದ 'ಕನ್ನಡಿಗ' ರವಿಚಂದ್ರನ್

  |

  ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಬಹುನಿರೀಕ್ಷೆಯ 'ಕನ್ನಡಿಗ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಮುಹೂರ್ತ ಮಾಡಿದ್ದ ಸಿನಿಮಾತಂಡ ಆಗಲೇ ಚಿತ್ರೀಕರಣ ಪ್ರಾರಂಭ ಮಾಡಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾದ ಚಿತ್ರೀಕರಣ ಸದ್ಯ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದೆ.

  ಚಿತ್ರದಲ್ಲಿ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿರುವ ರವಿಚಂದ್ರನ್ ಗೆಟಪ್ ಇತ್ತೀಚಿಗಷ್ಟೆ ರಿವೀಲ್ ಆಗಿದೆ. ಇದೀಗ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಹೊರಬಿದ್ದಿದೆ. ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಜೇಮಿ ಆಲ್ಟರ್ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

  'ಕನ್ನಡಿಗ' ಸಿನಿಮಾದ ರವಿಚಂದ್ರನ್ ಲುಕ್ ರಿವೀಲ್

  ಹೌದು, ಕನ್ನಡಿಗ ಸಿನಿಮಾದಲ್ಲಿ ಜೇಮಿ ಆಲ್ಟರ್, ಕನ್ನಡದ ಮೊದಲು ನಿಘಂಟು ಸಂಪಾದಿಸಿದ ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಜೇಮಿ ಆಲ್ಟರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸೆಟ್ ನಲ್ಲಿ ರವಿಚಂದ್ರನ್ ಜೊತೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ.

  ಜೇಮಿ ಆಲ್ಟರ್ ಖ್ಯಾತ ನಟ ಟಾಮ್ ಆಲ್ಟರ್ ಅವರ ಮಗ. ಟಾಮ್ ಆಲ್ಟರ್ ಹಿಂದಿ, ಇಂಗ್ಲೀಷ್, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. 1977 ರಲ್ಲಿ ಬಿಡುಗಡೆಯಾಗಿದ್ದ ಕನ್ನಡದ 'ಕನ್ನೇಶ್ವರ ರಾಮ' ಚಿತ್ರದಲ್ಲೂ ಟಾಮ್ ಆಲ್ಟರ್ ನಟಿಸಿದ್ದರು. ಎಂ.ಎಸ್.ಸತ್ಯು ಈ ಚಿತ್ರ ನಿರ್ದೇಶಿಸಿದರು. ಈ ಚಿತ್ರದಲ್ಲಿ ಟಾಮ್ ಆಲ್ಟರ್ ಬ್ರಿಟಿಷ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ, ಅವರ ಮಗ ಕನ್ನಡ ಸಿನಿಮಾ ಮಾಡುತ್ತಿರುವುದು ವಿಶೇಷ.

  3 ಜನ ಒಳ್ಳೆ ಗ್ಲಾಮರ್ ಎಂದು ಕಾಲೆಳೆದ Upendra | Filmibeat Kannada

  ಅಂದಹಾಗೆ 'ಕನ್ನಡಿಗ' ನಿರ್ದೇಶಕ ಬಿ ಎಂ ಗಿರಿರಾಜ್ ಸಾರಥ್ಯದಲ್ಲಿ ಮೂಡಿಬರುತ್ತಿದೆ. ಈಗಾಗಲೇ ಜಟ್ಟ ಮತ್ತು ಮೈತ್ರಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಗಿರಿರಾಜ್ ಇದೀಗ ಕನ್ನಡಿಗ ಸಿನಿಮಾ ಮೂಲಕ ಅಭಿಮಾನಿಗಳ ಬರ್ತಿದ್ದಾರೆ. 'ಕನ್ನಡಿಗ' 1858ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಆ ಕಾಲವನ್ನು ಮರುಸೃಷ್ಟಿ ಮಾಡಲಾಗಿದೆ. ಇಲ್ಲಿ ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾನಿ ಚಂದ್ರಶೇಖರ್ ಕಾಣಿಸಿಕೊಂಡಿದ್ದಾರೆ, ಇನ್ನು ದತ್ತಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.

  English summary
  Actor Jamie Alter joins Kannada movie shooting. He is playing reverend Ferdinand Kittel role in Ravichandran Kannada movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X