ಬಹುನಿರೀಕ್ಷಿತ 'ಮ್ಯಾಕ್ಸ್' ರಿಲೀಸ್ ಬಗ್ಗೆ ಕೈ ಎತ್ತಿಬಿಟ್ಟ ಕಿಚ್ಚ ಸುದೀಪ್!

ಕನ್ನಡದಲ್ಲಿ ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಪದೇ ಪದೆ ತಡವಾಗುತ್ತಿದೆ. ಅದರಲ್ಲೂ ಸ್ಟಾರ್ ನಟರ ಚಿತ್ರಗಳು ನಿಯಮಿತವಾಗಿ ತೆರೆಗೆ ಬರದೇ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಯಶ್, ರಿಷಬ್ ಶೆಟ್ಟಿ ಚಿತ್ರಗಳು ಸದ್ಯಕ್ಕಿಲ್ಲ. ರಕ್ಷಿತ್ ಶೆಟ್ಟಿ ಸಿನಿಮಾ ಶುರು ಮಾಡಿಲ್ಲ, ಶ್ರೀಮುರಳಿ, ಗಣೇಶ್, ದುನಿಯಾ ವಿಜಯ್ ಮೊನ್ನೆ ಒಂದೊಂದು ಸಿನಿಮಾ ಕೊಟ್ಟಿದ್ದಾರೆ.

ಒಟ್ಟಾರೆ ಸ್ಟಾರ್ ನಟರ ದೊಡ್ಡ ಚಿತ್ರಗಳಿಲ್ಲದೇ ಕನ್ನಡ ಚಿತ್ರರಂಗ ಸೊರಗುತ್ತಿದೆ. 'ಬಘೀರ' ಹಾಗೂ 'ಭೈರತಿ ರಣಗಲ್' ಗೆಲುವು ತಕ್ಕಮಟ್ಟಿಗೆ ಸಮಾಧಾನ ತಂದಿದೆ. ಆದರೆ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಭಿಮಾನಿಗಳು ಅಪ್‌ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ಈ ವರ್ಷ ಸಿನಿಮಾ ತೆರೆಗಪ್ಪಳಿಸೋದು ಅನುಮಾನ ಎನ್ನುವಂತಾಗಿದೆ.

Actor Kichcha sudeep interesting comments on MAx movie Release Date

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ತಿಂಗಳ ಹಿಂದೆಯೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗ್ತಿಲ್ಲ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ತಂದಿದೆ. ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾ ತೆರೆಕಂಡು ಎರಡೂವರೆ ವರ್ಷ ಆಗುತ್ತಾ ಬಂದಿದೆ. ಇವರೆಗೆ ಮತ್ತೊಂದು ಸಿನಿಮಾ ಇಲ್ಲ. 'ಮ್ಯಾಕ್ಸ್' ಬಿಟ್ಟರೆ ಇನ್ನೊಂದು ಸಿನಿಮಾ ಯಾವಾಗ ಎನ್ನುವುದು ಗೊತ್ತಿಲ್ಲ.

ಪ್ಯಾನ್ ಇಂಡಿಯಾ ಸಿನಿಮಾಗಳ ಗುಂಗಿನಲ್ಲಿ ಚಿತ್ರರಂಗ ಬಡವಾಗುತ್ತಿದೆ ಎನ್ನುವ ಆರೋಪವೂ ಇದೆ. ದೊಡ್ಡ ಸಿನಿಮಾಗಳನ್ನು ಮಾಡಲು ಹೆಚ್ಚು ಸಮಯ ಬೇಕು ಎನ್ನುವುದು ನಟರು ಹಾಗೂ ಫಿಲ್ಮ್ ಮೇಕರ್ಸ್ ವಾದ. ಅದನ್ನು ಒಪ್ಪಿಕೊಂಡರೂ ತೀರ ತಡವಾದರೆ ಕಷ್ಟ ಎನ್ನುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

Actor Kichcha sudeep interesting comments on MAx movie Release Date

ವಿಜಯ್ ಕಾರ್ತಿಕೇಯನ್ ನಿರ್ದೇಶನದ 'ಮ್ಯಾಕ್ಸ್' ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್, ಟೀಸರ್, ಸಾಂಗ್ ರಿಲೀಸ್ ಆಗಿ ಅಭಿಮಾನಿಗಳ ಮನಗೆದ್ದಿದೆ. ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್, ಸುಕೃತಾ ವಾಗ್ಲೆ, ಸುನೀಲ್, ಪ್ರಮೋದ್ ಶೆಟ್ಟಿ ಚಿತ್ರದ ತಾರಾಗಣದಲ್ಲಿದ್ದಾರೆ.

ಕನ್ನಡ ಹಾಗೂ ತಮಿಳು ಕಲಾವಿದರು, ತಂತ್ರಜ್ಞರು ಸೇರಿ ಮಾಡಿರುವ ಸಿನಿಮಾ ಇದು. ಶೇಖರ್ ಚಂದ್ರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ 'ಮ್ಯಾಕ್ಸ್' ಚಿತ್ರಕ್ಕಿದೆ. ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಅರ್ಜುನ್ ಮಹಾಕ್ಷಯ್ ಪಾತ್ರದಲ್ಲಿ ಕಿಚ್ಚ ಅಬ್ಬರಿಸಿದ್ದಾರೆ. ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪುಲಿ ಎಸ್. ತನು ಚಿತ್ರಕ್ಕೆ ಹಣ ಹೂಡಿದ್ದಾರೆ.

ಕೊನೆಗೂ 'ಮ್ಯಾಕ್ಸ್' ಸಿನಿಮಾ ರಿಲೀಸ್ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್ ವೇದಿಕೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪ ಆಗಿದೆ. ಅನುಷಾ ರೈ 50 ದಿನ ಪೂರೈಸಿ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಈ ವೇಳೆ ಆಕೆಯ ಪೋಷಕರು ಸಹ ಬಿಗ್‌ಬಾಸ್ ವೇದಿಕೆಗೆ ಬಂದಿದ್ದರು. ಅನುಷಾ ಸಹೋದರ ಗೋಪಿ ರೈ ಕೂಡ ಸುದೀಪ್ ಅವರ ದೊಡ್ಡ ಅಭಿಮಾನಿ.

ಸಹೋದರಿ ಬಗ್ಗೆ ಮಾತನಾಡಲು ಗೋಪಿ ರೈ ಅವರನ್ನು ಸುದೀಪ್ ವೇದಿಕೆಗೆ ಕರೆದರು. ಈ ವೇಳೆ ಗೋಪಿ ಅಭಿಮಾನದ ಬಗ್ಗೆಯೂ ಚರ್ಚೆ ಆಯಿತು. ಬಳಿಕ 'ಮ್ಯಾಕ್ಸ್' ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿರುವುದಾಗಿ ಗೋಪಿ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಸುದೀಪ್ "ನಾನು ಕೂಡ ಕಾಯ್ತಿದ್ದೀನಿ ಸರ್. ಅದ್ಯಾವಾಗ ಪುಣ್ಯತ್ಮರು ದೊಡ್ಡ ಮನಸ್ಸು ಮಾಡ್ತಾರೋ ಗೊತ್ತಿಲ್ಲ" ಎಂದಿದ್ದಾರೆ.

ಸುದೀಪ್ ಮಾತು ಕೇಳಿದ್ದರೆ ಖುದ್ದು ಅವರಿಗೂ 'ಮ್ಯಾಕ್ಸ್' ಸಿನಿಮಾ ರಿಲೀಸ್ ಡೇಟ್ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎನ್ನುವುದು ಗೊತ್ತಾಗುತ್ತಿದೆ. ಸಿನಿಮಾ ಚಿತ್ರೀಕರಣ ಮುಗಿದಿದೆ. ಇನ್ನೇನಿದ್ದರೂ ಚಿತ್ರತಂಡವೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿಸಿ ಸಿನಿಮಾ ರಿಲೀಸ್ ಮಾಡಬೇಕು, ಅದಕ್ಕಾಗಿ ನಾನು ಕಾಯುತ್ತಿದ್ದೇನೆ ಎನ್ನುವಂತೆ ಸುದೀಪ್ ಹೇಳಿರುವುದು ಗೊತ್ತಾಗುತ್ತಿದೆ. ಸಂಕ್ರಾಂತಿ ತಪ್ಪಿದರೆ ಶಿವರಾತ್ರಿ ವೇಳೆಗೆ 'ಮ್ಯಾಕ್ಸ್' ಸಿನಿಮಾ ತೆರೆಗೆ ಬರುವ ನಿರೀಕ್ಷೆಯಿದೆ.

More from Filmibeat

English summary
Finally Actor Kichcha Sudeep reacts on Max Movie Release in Bigg Boss stage;
Read more about: sudeep max sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X