»   » ಕಮಲದ ಕೈಹಿಡಿದ ನಟ ಕುಮಾರ್ ಗೋವಿಂದ್

ಕಮಲದ ಕೈಹಿಡಿದ ನಟ ಕುಮಾರ್ ಗೋವಿಂದ್

Posted By: ಉದಯರವಿ
Subscribe to Filmibeat Kannada

ನಟ ಕುಮಾರ್ ಗೋವಿಂದ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಭಾನುವಾರ (ಫೆ.15) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆಯ ಕಾರ್ಯಕ್ರಮದಲ್ಲಿ ಅವರು ಕಮಲದ ಕೈಹಿಡಿದಿದ್ದಾರೆ.

ಕುಮಾರ್ ಗೋವಿಂದ್ ಅವರು ಸ್ಥಳೀಯವಾಗಿ ರಾಜಕೀಯ ಮುಖಂಡರ ಜೊತೆ ಕಾಣಿಸಿಕೊಂಡಿದ್ದರೂ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಲಿಲ್ಲ. ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಕುಮಾರ್ ಅವರ ಸಮ್ಮುಖದಲ್ಲಿ ಗೋವಿಂದ್ ಬಿಜೆಪಿಗೆ ಸೇರ್ಪಡೆಗೊಂಡರು.

Actor Kumar Govind joins BJP

ನೆಲಹಂಕದ ಅರಿಶಿಣಕುಂಟೆ ಗ್ರಾಮದ ಫಾರ್ಮ್ ಹೌಸ್ ನಲ್ಲಿ ವಾಸವಾಗಿರುವ ಕುಮಾರ್ ಗೋವಿಂದ್ ಅವರು 'ಶ್!' ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಪ್ರವರ್ಧಮಾನಕ್ಕೆ ಬಂದವರು. ಅವರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರೂ ಯಾವ ಪಕ್ಷದೊಂದಿಗೂ ಗುರುತಿಸಿಕೊಂಡಿರಲಿಲ್ಲ.

ಈ ಬಗ್ಗೆ ಮಾತನಾಡಿರುವ ಕುಮಾರ್ ಗೋವಿಂದ್, "ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವರ ಕಾರ್ಯಕ್ರಮಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು."

ಇತ್ತೀಚೆಗೆ ಸಾಯಿಕುಮಾರ್ ಅವರ ಸಹೋದರ ರವಿಶಂಕರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಕುಮಾರ್ ಗೋವಿಂದ್ ಅವರಿಗೆ ಬಿಜೆಪಿ ಗಾಳಹಾಕಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಿನಿಮಾ ತಾರೆಗಳು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

English summary
Sandalwood actor, producer Kumar Govind joins BJP on Sunday (15th February). The actor is willing to contest election as a BJP candidate in future. Earlier, the actor had even expressed his intention to join politics.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada